ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುವೆಂಪು ವಿವಿ ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆ ವತಿಯಿಂದ ಸೆ. 13 ರಂದು ನನ್ನ ಮೆಚ್ಚಿನ ಪುಸ್ತಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಪ್ರಕಾಶ್ ಮರ್ಗನಳ್ಳಿ ತಿಳಿಸಿದ್ದಾರೆ.
ವಾಣಿಜ್ಯ ಕಾಲೇಜಿನಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಕುವೆಂಪು ವಿವಿ ಪದವಿ ಕಾಲೇಜು ಕನ್ನಡ ಅಧ್ಯಕ್ಷರ ವೇದಿಕೆಯ ಕಾರ್ಯದರ್ಶಿ ಡಾ. ಎಸ್.ಎಂ. ಮುತ್ತಯ್ಯ ಉದ್ಘಾಟಿಸಲಿದ್ದಾರೆ.

ಕಾಲೇಜಿನ ಪ್ರಾಂಶುಪಾಲರಾದ ಡಾ. ಅವಿನಾಶ್ ಟಿ. ಅಧ್ಯಕ್ಷತೆ ವಹಿಸಲಿದ್ದಾರೆ.ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ್ ಮೂರ್ತಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ಲವ ಜಿ.ಆರ್., ಡಾ. ದೊಡ್ಡ ನಾಯ್ಕ ಹೆಚ್., ಡಾ. ರಾಜೀವ ನಾಯ್ಕ ಎಸ್. ಉಪಸ್ಥಿತರಿರುವರು. ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಲೇಖಕರ ಕೃತಿಗಳ ಕುರಿತು ಪ್ರಬಂಧ ಮಂಡಿಸುವರು.