ಶಿವಮೊಗ್ಗ | ನನ್ನ ಮಾತನ್ನು ಪೂರ್ಣವಾಗಿ ತಿರುಚಲಾಗಿದೆ : ಶಾಸಕ ಸಂಗಮೇಶ್

Date:

ಶಿವಮೊಗ್ಗ, “ನಾನು ಮುಸಲ್ಮಾನರ ಹಬ್ಬವನ್ನು ನೋಡಿ ಖುಷಿಯಾಗಿ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಬೇಕು ಎಂದು ಹೇಳಿದ್ದೇನೆಯೇ ಹೊರತು ಬೇರೆ ಅರ್ಥದಲ್ಲಿ ಅಲ್ಲ. ನಾನು ಆಡಿರುವ ಮಾತನ್ನು ತಿರುಚಲಾಗಿದೆ” ಎಂದು ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್​​​ ಸ್ಪಷ್ಟನೆ ನೀಡಿದರು.

- Advertisement -

ಭದ್ರಾವತಿಯಲ್ಲಿ ಬುಧವಾರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, “ನಿಜವಾದ ಹಿಂದೂಗಳು ಅಂದರೆ ಕಾಂಗ್ರೆಸ್ಸಿಗರು. ಬಿಜೆಪಿ-ಜೆಡಿಎಸ್‌ನವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಮುಸಲ್ಮಾನರು ಮಾಡಿದ ಹಬ್ಬವನ್ನು ನೋಡಿ ಸಂತೋಷದಿಂದ ನಾನು ಮುಸಲ್ಮಾನಾಗಬೇಕೆಂದಿದ್ದೇನೆ. ನನ್ನ ಮಾತನ್ನು ಪೂರ್ಣವಾಗಿ ತಿರುಚಲಾಗಿದೆ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪ್ರತಿಕ್ರಿಯೆ

ಪಾಕ್​​ ಪರ ಘೋಷಣೆ ಕೂಗಿದವರನ್ನು ಹಿಡಿದು ಒಳಗೆ ಹಾಕಲಿ

“ಪಾಕಿಸ್ತಾನ​​​​ ಪರ ಘೋಷಣೆ ಕೂಗಿದವರನ್ನು ಹಿಡಿದು ಬೂಟ್​ನಲ್ಲಿ ಹೊಡೆದು ಒಳಗೆ ಹಾಕಿ ಎಂದು ನಾನು ಎಸ್​ಪಿ ಅವರಿಗೆ ತಿಳಿಸಿದ್ದೇನೆ. ದೇಶದ್ರೋಹಿ ಕೆಲಸವನ್ನು ಯಾರೂ ಮಾಡಬಾರದು” ಎಂದು ಹೇಳಿದರು.ನಾನು 4 ಬಾರಿ ಶಾಸಕನಾಗಲು ಮುಸಲ್ಮಾನರ ಆಶೀರ್ವಾದ ಕಾರಣ.

“ನನಗೆ ನಾಲ್ಕು ಬಾರಿ ಶಾಸಕರಾಗಲು ಎಲ್ಲಾ ಧರ್ಮದವರೂ ಸಹಕಾರ ನೀಡಿದ್ದಾರೆ. ಆದರೆ, ನನ್ನ ಗೆಲುವಿಗೆ ಪ್ರಮುಖವಾಗಿ ಮುಸಲ್ಮಾನರು ಕಾರಣ ಎಂದರು.ನನ್ನ ಮಗನನ್ನು ರಾಜಕೀಯಕ್ಕೆ ತರಲು ಪಕ್ಷದ ಮುಖಂಡರು ಒಪ್ಪಿದ್ದಾರೆ: “ನನ್ನ ಮಗ ಗಣೇಶನನ್ನು ರಾಜಕೀಯಕ್ಕೆ ತರಬೇಕು ಎಂದು ನಾನು ಕೇಳಿಕೊಂಡಿದ್ದೇನೆ. ಜನರ ಆಶೀರ್ವಾದ ಇದ್ದರೆ ಅವನು ಶಾಸಕ ಅಥವಾ ಸಂಸದ ಆಗಬಹುದು. ಇದಕ್ಕೆ ನಮ್ಮ ಪಕ್ಷದ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ” ಎಂದು ತಿಳಿಸಿದರು.

“ನಾನು ಮಂತ್ರಿಸ್ಥಾನ ಕೇಳಿಲ್ಲ. ಅವರು ನನ್ನ ಹಿರಿತನ ನೋಡಿ ಅವಕಾಶ ಕೊಟ್ಟರೆ ಪಡೆಯುವೆ. ನನಗೆ ಅವಕಾಶ ಕೊಟ್ಟರೂ ಕೊಡದೇ ಇದ್ದರೂ ನಾನು ಯಾವಾಗಲೂ ಕಾಂಗ್ರೆಸ್ಸಿಗ” ಎಂದು ಹೇಳಿದರು.ಪಕ್ಷದ ತಾಲೂಕು ಅಧ್ಯಕ್ಷರು, ಪ್ರಚಾರ ಸಮಿತಿ ಅಧ್ಯಕ್ಷರು, ಭದ್ರವತಿ ನಗರಸಭೆ ಸದಸ್ಯರು ಈ ವೇಳೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ...

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...