ರಷ್ಯಾ ದೇಶದ ಮಾಸ್ಕೋದಲ್ಲಿ ನಡೆಯಲಿರುವ ಇಂಟರ್‌ನ್ಯಾಷನಲ್ ವುಶು ಸ್ಟಾರ್ ಚಾಂಪಿಯನ್ ಶಿಪ್ – 2025ರ ಪಂದ್ಯಕ್ಕೆ ಪ್ರಣತಿ ಆಯ್ಕೆಯಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಲಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಶುಭಹಾರೈಸಿದರು.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪನವರನ್ನು ಮಾರ್ಷಲ್ ಆರ್ಟ್ಸ್‌ನಲ್ಲಿ ರಾಷ್ಟ್ರಮಟ್ಟದ ಅತಿ ಕಿರಿಯ ವಯಸ್ಸಿನ ಪದಕ ವಿಜೇತೆ ಹೆಗ್ಗಳಿಕೆಗೆ ಪಾತ್ರರಾಗಿ ಇತಿಹಾಸ ಸೃಷ್ಟಿಸಿರುವ ಕುಮಾರಿ ಪ್ರಣತಿ ಜಿ ಅವರನ್ನು ಇಂದು ಭೇಟಿ ಮಾಡಿ ಶುಭ ಹಾರೈಸಿದರು.

ಈ ವೇಳೆ ಉದ್ಯಮಿಯಾದ ಪ್ರತಾಪ್ ಕುಮಾರ್ ಆರ್ ಅವರು ಸಚಿವರ ಮೂಲಕ ಪ್ರಣತಿಯವರ ಮುಂದಿನ ಕ್ರೀಡಾ ಸಾಧನೆಗಾಗಿ “ಒಂದು ಲಕ್ಷ ಮೊತ್ತದ ಚೆಕ್” ನೀಡುವುದರ ಮೂಲಕ ಆರ್ಥಿಕವಾಗಿ ನೆರವು ನೀಡಿ ಪ್ರೋತ್ಸಾಹಿಸಿದರು. ಈ ಆರ್ಥಿಕ ನೆರವು ನೀಡಿದ ಉದ್ಯಮಿ ಪ್ರತಾಪ್ ಅವರನ್ನು ಸಚಿವರು ಅಭಿನಂದಿಸಿದರು.
ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಇನ್ನಷ್ಟು ಹೆಚ್ಚಿನ ಶಕ್ತಿ ನೀಡಲು ಬೇಕಾದ ಪೂರಕ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡ ಬಿ ಹೆಚ್ ಚಂದ್ರಶೇಖರ್ ಹಾಗೂ ಇತರರು ಇದ್ದರು.