ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣಕ್ಕೆ ನೂತನ ತಾಲೂಕು ಅಧ್ಯಕ್ಷರ ನೇಮಕ

Date:

Advertisements

ಶಿವಮೊಗ್ಗ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಸಾಗರ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಜನಾರ್ಧನ್ ಪೂಜಾರಿ ಹಾಗೂ ಉಪ ಅದ್ಯಕ್ಷರನ್ನಾಗಿ ಅರುಣ್ ಕುಮಾರ್ ಪಾಳೆಗಾರ್ ಅವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸರ್ವಾನು ಮತದಿಂದ ಜಿಲ್ಲಾ ಘಟಕ ಆಯ್ಕೆ ಮಾಡಿದೆ.

ಇವರಿಗೆ ನಾಡು ನುಡಿ ನೆಲ ಜಲ ಭಾಷೆ ರೈತ ಪರ ವಿದ್ಯಾರ್ಥಿಪರ ಶೋಷಿತರ ಪರ ಧನಿಯಾಗಿರುವಂತೆ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇವರುಗಳಿಗೆ ಅಧೀನ ಪದಾಧಿಕಾರಿಗಳ ಆಯ್ಕೆ ಅಧಿಕಾರ ಹೊಂದಿದ್ದು ಸಂಘಟನೆಗೆ ಯಾವುದೇ ದಕ್ಕೆ ಬರದಂತೆ ಕಾರ್ಯ ನಿರ್ವಹಿಸಬೇಕೆಂದು ಸಂಘಟನೆ ಆಶಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ನಡೆಯಿತು ಜಿಲ್ಲಾ ಕಾರ್ಯಾಧ್ಯಕ್ಷ ರಾಗಿ ಉಮೇಶ್ ಗದ್ದೆ ಮನೆ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಗಂಗಾಧರ್ ಎಸ್, ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಸಂತೋಷ್ ಫ್ರಾಂಕ್ಲಿನ್, ಹಾಗೂ ಗ್ರಾಮಾಂತರ ಅಧ್ಯಕ್ಷರಾಗಿ ಮಂಜುನಾಥ್ ಹೆಚ್ ಎನ್, ಹಾಗೂ ಮಹಿಳಾ ಜಿಲ್ಲಾ ಘಟಕದ ಕಾರ್ಯ ಅಧ್ಯಕ್ಷರಾಗಿ ವೀಣಾ. ಎಚ್ ಉಪಾಧ್ಯಕ್ಷರಾಗಿ ಪದ್ಮ ಎನ್ ಹಾಗೂ ಮಾಲತಿ ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆರತಿ ತಿವಾರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಜ್ಯೋತಿ ಎನ್. ಇವರುಗಳನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಸಂಬಂಧಪಟ್ಟಂತೆ ಪೂರ್ವಭಾವಿ ಸಭೆಯನ್ನು ಸಹ ನಡೆಸಲಾಯಿತು ಹಾಗೂ ಸದಸ್ಯತ್ವ ಅಭಿಯಾನವನ್ನು ಸಹ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ ಎಸ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಸಿ ಪತ್ರಿಕಾ ಪ್ರಚಾರ ಸಮಿತಿ ಅಧ್ಯಕ್ಷರಾದ ಮಾಲತೇಶ್ ನಗರ ಅಧ್ಯಕ್ಷರಾದ ಜೀವನ್ ಸಭೆಯಲ್ಲಿ ಮಾಧ್ಯಮ ಸಲಹೆಗಾರ ಅನಿಲ್ ಕುಮಾರ್ ಜಿಲ್ಲಾ ಕಾರ್ಯದರ್ಶಿ ರಾಮು. ನಾಗರಾಜ್ ಸಾಧಿಕ್ ನೂರುಲ್ಲಾ ಪ್ರವೀಣ್ ಕುಮಾರ್ ರಾಮಣ್ಣ ಟಾಟಾ ಎಸ್ . ಪ್ರದೀಪ್ ಕಾಂತಾ ರಾಜ್ ಮುಂತಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X