ಶಿವಮೊಗ್ಗ | ಮನರೇಗಾ ಹಣ ದುರುಪಯೋಗ ಸಾಬೀತಾದರೂ ಕ್ರಮವಿಲ್ಲ; ಭ್ರಷ್ಟರ ರಕ್ಷಣೆಗೆ ಜಿಪಂ ಸಿಇಒ?

Date:

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹುರಳಿ ಗ್ರಾಮ ಪಂಚಾಯತ್‌ನ ಕಂಪ್ಯೂಟರ್ ಆಪರೇಟರ್ ಒಬ್ಬರು ಮನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ನಿಧಿಯ ಹಣದ ದುರುಪಯೋಗದಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ಎರಡು ವರ್ಷಗಳ ಹಿಂದೆಯೇ ನಡೆದ ತಪಾಸಣೆಯಲ್ಲಿ ಆರೋಪ ಸಾಬೀತಾದರೂ, ಈವರೆಗೆ ಯಾವುದೇ ಶಿಸ್ತಿನ ಕ್ರಮ ಜಾರಿಯಾಗಿಲ್ಲ ಎಂಬ ಆರೋಪಗಳು ಮತ್ತೊಮ್ಮೆ ಬೆಳಕಿಗೆ ಬಂದಿವೆ.

- Advertisement -

2024ರ ಆಗಸ್ಟ್‌ನಲ್ಲಿ, ಈದಿನ.ಕಾಂ ಈ ಅಕ್ರಮವನ್ನು ಬಹಿರಂಗಪಡಿಸಿತ್ತು. “ಶಿವಮೊಗ್ಗ ಮನರೇಗಾ ಹಣ ದುರುಪಯೋಗ ಸಾಬೀತು: ಗ್ರಾಪಂ ಸಿಬ್ಬಂದಿ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದ ಜಿಪಂ!” ಶೀರ್ಷಿಕೆಯಡಿ ವರದಿಯನ್ನೂ ಪ್ರಕಟಿಸಿತ್ತು. ಅಂದಿನ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಓಂಬುಡ್ಸ್ಮನ್ ಆದೇಶದಂತೆ ಆರೋಪಿಯ ಅಮಾನತು ಹಾಗೂ ಹಣ ವಸೂಲಿ ಮಾಡಲು ಆದೇಶಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆದೇಶ ಹೊರಡಿಸಿದ ಮೇಲೂ ಮನರೇಗಾ ನಿಧಿಗೆ ಹಣ ಜಮೆ ಮಾಡಲಾಗಿಲ್ಲ ಮತ್ತು ಪ್ರಕರಣದ ತನಿಖಾ ವರದಿ ಉಳಿದ ಸದಸ್ಯರಿಗೆ ಬಹಿರಂಗಪಡಿಸಲ್ಪಟ್ಟಿಲ್ಲ. ಇದೀಗ ಲಭ್ಯವಾದ ದಾಖಲೆಗಳ ಪ್ರಕಾರ, ಪ್ರಸ್ತುತ ಸಿಇಒ ಹೇಮಂತ್ ಎನ್ ಅವರು ಆರೋಪಿಯ ಕೋರಿಕೆಯ ಮೇರೆಗೆ ಅವನನ್ನು ಪ್ರಭಾವ ಉಳ್ಳ ಸೊರಬ ತಾಲೂಕಿನ ಮೂಡಿದೊಡ್ಡಿಕೊಪ್ಪ ಪಂಚಾಯತ್‌ಗೆ ವರ್ಗಾವಣೆ ಮಾಡಿದ್ದಾರೆ.

ಸಾಮಾನ್ಯವಾಗಿ ಓಂಬುಡ್ಸ್ಮನ್ ಮೇಲ್ಮನವಿ ಪ್ರಾಧಿಕಾರವು ಎರಡು ತಿಂಗಳೊಳಗೆ ತೀರ್ಪು ನೀಡಬೇಕಾಗಿದ್ದರೆ, ಈಗ 20 ತಿಂಗಳುಗಳ ಕಾಲ ಯಾವುದೇ ತೀರ್ಪು ಪ್ರಕಟವಾಗಿಲ್ಲ. ಈ ನಿರ್ಲಕ್ಷ್ಯ ಕೂಡ ಆಡಳಿತದ ಶಿಥಿಲತೆಗೆ ಸಾಕ್ಷಿಯಾಗಿದೆ ಎನ್ನುವುದು ಸ್ಥಳೀಯರ ಆಕ್ಷೇಪ.

ಇತ್ತೀಚೆಗೆ ಕೆ.ಆರ್.ಎಸ್ ಪಕ್ಷದ ಜಿಲ್ಲಾ ಮುಖಂಡ ಮಂಜುನಾಥ್ ಅವರು ಈ ಕುರಿತಂತೆ ಸಿಇಒ ಹೇಮಂತ್ ಅವರನ್ನು ಭೇಟಿ ಮಾಡಿ, ಘಟನೆ ಮತ್ತು ಕ್ರಮವನ್ನು ಪ್ರಶ್ನಿಸಿದಾಗ, “ಈ ವಿಷಯವನ್ನು ಲೋಕಾಯುಕ್ತಕ್ಕೆ ಕೊಡಿ” ಎಂದು ಸಿಇಒ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಶಿವಮೊಗ್ಗ | ಮನರೇಗಾ ಹಣ ದುರುಪಯೋಗ ಸಾಬೀತು: ಗ್ರಾಪಂ ಸಿಬ್ಬಂದಿ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದ ಜಿಪಂ!

ಇದರಿಂದಾಗಿ ಮಂಜುನಾಥ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಪ್ರಕರಣದ ಕುರಿತು ತನಿಖೆ ನಡೆಸಿ, ಪ್ರಸ್ತುತ ಸಿಇಒ ಮೇಲೂ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಸಂಪೂರ್ಣ ಪ್ರಕರಣವು, ಅಕ್ರಮ ಸಾಬೀತಾದರೂ ತಕ್ಷಣ ಕ್ರಮವಿಲ್ಲದೆ, ಬದಲಿಗೆ ವರ್ಗಾವಣೆ ಮುಖಾಂತರ ರಕ್ಷಣೆ ಸಿಗುವ, ಹಳೆ ಶೈಲಿಯ ನಿರ್ಲಕ್ಷ್ಯ ಮತ್ತು ಪ್ರಭಾವಶಾಲಿಗಳ ದಬ್ಬಾಳಿಕೆಗೆ ಮತ್ತೊಂದು ಸ್ಪಷ್ಟ ನಿದರ್ಶನವಾಗಿದೆ ಎಂದು ಹಲವು ಜನಪರ ಕ್ಯಾಂಪೇನ್‌ಗಳು ಆರೋಪಿಸುತ್ತಿವೆ.

WhatsApp Image 2025 11 17 at 5.17.05 PM
ರಾಘವೇಂದ್ರ, ಶಿವಮೊಗ್ಗ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...