ಶಿವಮೊಗ್ಗ | ರಾಷ್ಟ್ರಗೀತೆಗೆ ಅಪಮಾನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಜಾಕ್ಕೆ ಎನ್‌ಎಸ್‌ಯುಐ ಆಗ್ರಹ

Date:

ರಾಷ್ಟ್ರಗೀತೆ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ ಎಂದು ಹೇಳಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಎನ್‌ಎಸ್‌ಯುಐ ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಸಿತು.

- Advertisement -

“ಜನಗಣ ಮನ ಗೀತೆಯನ್ನು ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದು, ಅದನ್ನು ರಾಷ್ಟ್ರಗೀತೆಯನ್ನಾಗಿ ಮಾಡಿರುವುದು ಸರಿಯಲ್ಲವೆಂದು ಹೇಳುವ ಮೂಲಕ 140 ಕೋಟಿ ಮಂದಿ ಭಾರತೀಯರ ಅಸ್ಮಿತೆಯಾಗಿರುವ ರಾಷ್ಟ್ರಗೀತೆಗೆ ಅಪಮಾನವೆಸಗಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ನವೆಂಬರ್ 5ರಂದು ಹೊನ್ನಾವರದಲ್ಲಿ ಆಯೋಜಿಸಿದ್ದ ‘ಏಕತೆಗಾಗಿ ನಡಿಗೆ’ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯು ರಾಷ್ಟ್ರಗೀತೆಯಾಗಬೇಕೆಂದು ಪ್ರತಿಪಾದಿಸುತ್ತ ಭಾರತೀಯರೆಲ್ಲರೂ ಒಪ್ಪಿಕೊಂಡಿರುವ ‘ಜನಗಣಮನ’ ರಾಷ್ಟ್ರಗೀತೆಯಾಗಿರುವುದು ಸರಿಯಲ್ಲ. ಅದನ್ನು ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದೆಂದು ಹೇಳುವ ಮೂಲಕ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ” ಎಂದು ತೀವ್ರವಾಗಿ ಖಂಡಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೈದಿಗೆ ಸ್ವೀಟ್ ಬಾಕ್ಸ್‌ನಲ್ಲಿ ಗಾಂಜಾ ಸಪ್ಲೈ; ಆರೋಪಿ ಬಂಧನ

“ರಾಷ್ಟ್ರಪತಿಯವರು ಕೂಡಲೇ ಮಧ್ಯಪ್ರವೇಶಿಸಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಸದ ಸ್ಥಾನದಿಂದ ವಜಗೊಳಿಸಬೇಕು. ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಕಾಗೇರಿಯವರು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಲಯದ ಅಧ್ಯಕ್ಷ ಚೇತನ್ ಕೆ, ಯುವ ಮುಖಂಡ ಮಧುಸೂದನ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಡ್ಡು ಹಾಗೂ ಪ್ರಮುಖರಾದ ವಿಜಯ್, ರವಿ ಕಾಟಿಕೆರೆ ರವಿ ಕುಮಾರ, ಚಂದ್ರೋಜಿ ರಾವ್, ವರುಣ್, ಅಭಿ, ಆದಿತ್ಯ, ಸುಭಾನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...