ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ 95% ಗಿಂತ ಮೇಲೆಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‍ಗಳಲ್ಲಿ ರ್ಯಾಂಕ್ ಗಳಿಸಿದ, ಯುಪಿಎಸ್‍ಸಿ-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ತಿಗಳು, ಸಾಧಕರು ತಮ್ಮ ಹೆಸರನ್ನು 8 ಆಗಸ್ಟ್ 2025 ರ ಮುಂಚಿತವಾಗಿ ನೋಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಲು ಕೊರಿದ್ದಾರೆ.
ಮಾಹಿತಿಗಾಗಿ ಮತ್ತು ಹೆಸರು ನೋಂದಣಿ ಮಾಡಲು ಎನ್.ಎಸ್.ಯು.ಐ. ಶಿವಮೊಗ್ಗ ನಗರ ಪ್ರಧಾನ ಕಾರ್ಯದರ್ಶಿ ವರುಣ್ ವಿ. ಪಂಡಿತ್, ಮೊ: 8884184955 ಇವರನ್ನು ಸಂಪರ್ಕಿಸಿ ಹೆಸರು ನೊಂದಾಯಿಸಲು ಎನ್.ಎಸ್.ಯು.ಐ ಕೋರಿದೆ.