ಶಿವಮೊಗ್ಗ, ಕರ್ನಾಟಕದ ಕ್ರಾಂತಿಕಾರಿ ಮುಖ್ಯಮಂತ್ರಿಗಳಾಗಿದ್ದ ಬಡ ಯೋಜನೆಗಳನ್ನು ಜನರ ಅಭಿವೃದ್ಧಿಗಾಗಿ ಅನೇಕ ಹೊಸ ಮುಖ್ಯಮಂತ್ರಿಗಳಾಗಿದ್ದ ಎಸ್ ಬಂಗಾರಪ್ಪ ರವರಿಗೆ ಮಾನವ ಹಕ್ಕುಗಳ ಹೋರಾಟ ಪ್ರಜ್ಞಾವಂತ, ಬಡವರ ಬಂಧುಗಳಾದ ಸಮಿತಿಯಿಂದ ಅಕ್ಟೋಬರ್ 26ರಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಸಮಾಜ ಸೇವೆಗಾಗಿ “ವಿಶ್ವಮಾನವ” ಎಂಬ ಬಿರುದಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿಯ ಮುಖಂಡ ಬಿ ಎನ್ ರಾಜು ತಿಳಿಸಿದರು.
ಶಿವಮೊಗ್ಗ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಿದ್ದವರು ಮುಖ್ಯಮಂತ್ರಿಗಳಾಗಿದ್ದ ಎಸ್. ಬಂಗಾರಪ್ಪನವರು. ಬಗರ್‌ಹುಕುಂ ರೈತರ ಬೆನ್ನೆಲುಬಾಗಿ ನಿರಂತರ ಕ್ರಾಂತಿಕಾರಿ ಹೋರಾಟ ನಡೆಸಿ ಕಾಗೋಡು ಸತ್ಯಾಗ್ರಹದ ಹೋರಾಟದ ಮುಂಚೂಣಿಯಲ್ಲಿ ಇದ್ದು, ಆಶ್ರಯ, ಆರಾಧನ, ಅಕ್ಷಯ, ಅಕ್ಷರ ತುಂಗಾ, ಗ್ರಾಮೀಣ ಕೃಪಾಂಕ, ರೈತರಿಗೆ ಉಚಿತ ವಿದ್ಯುತ್, ಯೋಜನೆಗಳನ್ನು ಜಾರಿ ಮಾಡಿ ರಾಜ್ಯದ ಕೋಟ್ಯಾಂತರ ರೈತರಿಗೆ ಬಡ ಜನರಿಗೆ ಆಶ್ರಯ ನೀಡಿದ್ದಾರೆ. ಕಡಿಮೆ ಅವಧಿಯಲ್ಲಿಯೇ ಹೆಚ್ಚು ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸಿದವರು.ಕ್ರಾಂತಿಕಾರಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ರವರು ಆಗಿದ್ದವರು ಎಂದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಾಗೋಡು ಸತ್ಯಾಗ್ರಹದ ರೂವಾರಿಗಳು ಮಾಜಿ ಸಚಿವರು ಮಾಜಿ ವಿಧಾನ ಸಭಾ ಅಧ್ಯಕ್ಷರು, ಪ್ರಜ್ಞಾವಂತ ರಾಜಕಾರಣಿಗಳಾದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪರವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ಮುತ್ಸದ್ಧಿ ರಾಜಕಾರಣಿಗಳು ಸಿ.ಪಿ.ಐ ರಾಜ್ಯಮಂಡಳಿ ಸದಸ್ಯರು ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ ವಹಿಸಲಿದ್ದಾರೆ ಎಂದರು.
ವಿಶ್ವಮಾನವ ಪ್ರಶಸ್ತಿಯನ್ನು ಬಂಗಾರಪ್ಪರವರ ಪರವಾಗಿ ಅವರ ಸುಪುತ್ರರಾದ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧುಬಂಗಾರಪ್ಪ ಸ್ವೀಕರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಬಿ ವೈ ರಾಘವೇಂದ್ರ, ಶಾಸಕ ಬೆಳೂರು ಗೋಪಾಲಕೃಷ್ಣ , ಶಾಸಕ ಬಿ ಕೆ ಸಂಗಮೇಶ್ವರ, ಬಲ್ಕಿಸ್ ಬಾನು, ಶಾಸಕಿ ಶಾರದ ಪೂರ್ಯಾನಾಯ್ಕ್ ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.