ಶಿವಮೊಗ್ಗ | ಜಾತಿ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ; ರವಿಕುಮಾರ್

Date:

ಜಾತಿ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ ಎಂದು ಭೋವಿ ಸಮಾಜದ ಜನರಿಗೆ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಮನವಿ ಮಾಡಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾಯಮೂರ್ತಿ ಹೆಚ್ .ಎನ್, ನಾಗಮೋಹನ್ ದಾಸ್ ಅವರ ನೇತೃತ್ವದ ಏಕ ಸದಸ್ಯ ಆಯೋಗದ ಮೂಲಕ ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಸಮೀಕ್ಷೆಯಲ್ಲಿ ಭೋವಿ ಸಮಾಜದ ಜನರು, ಕಡ್ಡಾಯವಾಗಿ ಪಾಲ್ಗೊಳ್ಳುವುದರ ಜತೆಗೆ ಯಾವುದೇ ಗೊಂದಲಕ್ಕೆ ಸಿಲುಕದ ಜಾತಿ ಕಾಲಂನಲ್ಲಿ ಭೋವಿ ಅಥವಾ ವಡ್ಡರ ಎಂದೇ ನಮೂದಿಸಬೇಕೆಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಜ್ಯಾದ್ಯಂತ ಸಮೀಕ್ಷೆ ಕಾರ್ಯವು ಮೇ. ೫ ರಿಂದಲೇ ಆರಂಭಗೊಂಡಿದೆ. ಜಿಲ್ಲೆಯಲ್ಲೂ ಸಮೀಕ್ಷೆಗೆ ನಿಯೋಜಿತಗೊಂಡ ಸಿಬ್ಬಂದಿ ಮನೆ ಮನೆಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಸಮಾಜದ ಜನರು ಯಾವುದೇ ನೆಪ ಹೇಳಿ ತಪ್ಪಿಸಿಕೊಳ್ಳದೆ ಅಥವಾ ತಾತ್ಸಾರ ಮಾಡದೆ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕಿದೆ.

ಯಾಕೆಂದರೆ ಈ ಸಮೀಕ್ಷೆಯಲ್ಲಿನ ಜಾತಿವಾರು ಅಂಕಿಅಂಶಗಳು ನಮ್ಮ ಸಮಾಜದ ಮುಂದಿನ ಭವಿಷ್ಯವನ್ನು ನಿರ್ಧಾರ ಮಾಡಲಿದೆ. ಜಾತಿವಾರು ಜನಸಂಖ್ಯೆಯ ಆಧಾರದ ಮೇಲೆಯೇ ಒಳ ಮೀಸಲು ಹಂಚಿಕೆಯಾಗುವ ಸಾಧ್ಯತೆಗಳಿವೆ. ಹಾಗಾಗಿ ಸಮಾಜದ ಜನರು ಯಾವುದೇ ಕಾರಣಕ್ಕೂ ಸಮೀಕ್ಷೆ ಕಾರ್ಯದಿಂದ ಮಾಡಿದ್ದಾರೆ ಎಂದಿದ್ದಾರೆ.

ಸಮೀಕ್ಷೆಯ ಸಂದರ್ಭದಲ್ಲಿ ಸಮೀಕ್ಷೆಗೆ ನಿಯೋಜಿತವಾದ ಸಿಬ್ಬಂದಿ ಆದಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ಕೇಳುತ್ತಿದ್ದಾರೆನ್ನುವ ಬಗ್ಗೆ ಜನರು ದೂರಿದ್ದಾರೆ. ಇದು ಎಷ್ಟು ವಾಸ್ತವವೋ ಗೊತ್ತಿಲ್ಲ, ಆದರೆ ಪರಿಶಿಷ್ಟ ಜಾತಿಗಳ ಒಳ ಮೀಸಲು ಹಂಚಿಕೆಗೆ ಸಂಬಂಧಿಸಿದ ಸಮೀಕ್ಷೆ ಮಾತ್ರ ಇದಾಗಿರುವುದರಿಂದ ಸರ್ಕಾರದ ನಿರ್ಧಿಷ್ಟ ಸೂಚನೆಗಳ ಮೇಲೆಯೇ ಸಮೀಕ್ಷದಾರರು ಜಾತಿವಾರು ದತ್ತಾಂಶಗಳನ್ನು ದಾಖಲು ಮಾಡಿಕೊಳ್ಳಬೇಕೆ ಹೊರತು, ಅವರ ಇಚ್ಚೆಗೆ ಅನುಸಾರ ಮಾಹಿತಿ ಸಂಗ್ರಹಿಸುವಂತಿಲ್ಲ.

ಅಂತಹ ಯಾವುದೇ ಘಟನೆಗಳು ಕಂಡು ಬಂದಲ್ಲಿ ಅಥವಾ ಅಧಿಕಾರಿಗಳು ಜಾತಿ ಹೆಸರನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ನಮೂದಿಸಿಕೊಂಡಲ್ಲಿ ಸಮಾಜದ ಮುಖಂಡರ ಗಮನಕ್ಕೆ ತರಬಹುದು ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...