ಶಿವಮೊಗ್ಗ | ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯ ನಿರ್ವಹಣೆ ಮಾಡಿ : ಎಡಿಜಿಪಿ ಹಿತೇಂದ್ರ

Date:

ಶಿವಮೊಗ್ಗ , ‘ಪ್ರಮುಖ ಗಣೇಶಮೂರ್ತಿಗಳು ಹಾಗೂ ಈದ್ ಮಿಲಾದ್ ಹಬ್ಬದ ಮೆರವಣಿಗೆಗಳ ಹಿನ್ನೆಲೆಯಲ್ಲಿ, ಬಂದೋಬಸ್ತ್ ಕಾರ್ಯಕ್ಕೆ ಶಿವಮೊಗ್ಗ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸ್ ಅಧಿಕಾರಿಗಳು, ಅತ್ಯಂತ ಜವಾಬ್ದಾರಿಯಿಂದ ಬಂದೋಬಸ್ತ್ ಕರ್ತವ್ಯ ನಿರ್ವಹಣೆ ಮಾಡಬೇಕು’ ಎಂದು ರಾಜ್ಯ ಪೊಲೀಸ್ ಇಲಾಖೆ ಕಾನೂನು – ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಆರ್ ಸೂಚಿಸಿದ್ದಾರೆ.

- Advertisement -

ಸೆಪ್ಟೆಂಬರ್ 1 ರ ಸಂಜೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ವಿಮರ್ಶನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಸಭೆಯಲ್ಲಿ ಎಡಿಜಿಪಿ ನೀಡಿದ ಸಲಹೆ – ಸೂಚನೆಗಳ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಎಚ್ಚರಿಕೆಯಿರಲಿ :

ಈಗಾಗಲೇ 5 ದಿನಗಳ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಗಳು ಮುಕ್ತಾಯವಾಗಿವೆ. ಮುಂದಿನ ದಿನಗಳಂದು ಮುಖ್ಯವಾಗಿ ಭದ್ರಾವತಿ, ಶಿವಮೊಗ್ಗ, ರಿಪ್ಪನ್ ಪೇಟೆ, ಸಾಗರದ ಹಿಂದೂ ಮಹಾಸಭಾ ಗಣಪತಿಗಳ ವಿಸರ್ಜನಾ ಪೂರ್ವ ಮೆರವಣಿಗೆಗಳು ನಡೆಯಲಿವೆ. ಬಂದೋಬಸ್ತ್ ಕರ್ತವ್ಯವನ್ನು ಬಹಳ ಎಚ್ಚರಿಕೆಯಿಂದ ಮಾಡಬೇಕು ಎಂದು ತಿಳಿಸಿದ್ದಾರೆ.

1002161533

ಹಾಗೆಯೇ ಶಿವಮೊಗ್ಗ ಜಿಲ್ಲೆಯ (ಸ್ಥಳೀಯ) ಅಧಿಕಾರಿಗಳು ಕೂಡ, ಬಂದೋಬಸ್ತ್ ಕರ್ತವ್ಯವನ್ನು ಜಾಗರೂಕತೆಯಿಂದ ನಿರ್ವಹಿಸಬೇಕು. ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು, ತಮಗೆ ನೇಮಕವಾದ ಸೆಕ್ಟರ್‌ ನಲ್ಲಿಯೇ ಕಾರ್ಯನಿರ್ವಹಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು ಎಂದು ತಾಕೀತು ಮಾಡಿದ್ದಾರೆ.

ಸಾಕಷ್ಟು ಮುಂಜಾಗ್ರತಾ ಕ್ರಮಗಳ ಪಾಲನೆ ಮಾಡಬೇಕು. ಮೆರವಣಿಗೆಗಳ ವೇಳೆ ಬೈಲೈನ್ ಪೆಟ್ರೋಲಿಂಗ್ ಕರ್ತವ್ಯವನ್ನು ಹೆಚ್ಚಾಗಿ ನಿರ್ವಹಿಸಬೇಕು. ಘೋಷಣೆಗಳನ್ನು ಕೂಗುವವರ ಮೇಲೆ ಅತ್ಯಂತ ಹೆಚ್ಚಿನ ನಿಗಾವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಮೆರವಣಿಗೆ ಹಾದು ಹೋಗುವ ಪ್ರಮುಖ ಸ್ಥಳಗಳಲ್ಲಿ ಡ್ರೋನ್ ಕ್ಯಾಮೆರಾ ಬಳಸಿಕೊಳ್ಳಬೇಕು. ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ, ಮೆರವಣಿಗೆಗಳಲ್ಲಿ 75 ಡೆಸಿಬಲ್‌ ಗಿಂತ ಹೆಚ್ಚಿಗೆ ಶಬ್ದವನ್ನುಂಟು ಮಾಡುವವರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಪೂರ್ವ ವಲಯ ಐಜಿಪಿ ಡಾ. ರವಿಕಾಂತೇ ಗೌಡ, ಎಸ್ಪಿ ಮಿಥುನ್ ಕುಮಾರ್ ಜಿ ಕೆ, ಬಿ ಎಂ ಟಿ ಎಫ್ ಪೊಲೀಸ್ ಅಧೀಕ್ಷರಾದ ಮುತ್ತುರಾಜ್, ಹುಬ್ಬಳ್ಳಿಯ ಐಎಸ್’ಡಿ ವಿಭಾಗದ ರಾಜೀವ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ಎ ಜಿ, ಎಸ್ ರಮೇಶ್ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...