ಶಿವಮೊಗ್ಗ | ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಿನ್ನೆಲೆ ಪೊಲೀಸರಿಂದ ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ

Date:

ಶಿವಮೊಗ್ಗ, ಗೌರಿ-ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲು ಆರಂಭಿಸಿದ್ದಾರೆ. ಹಬ್ಬಗಳು ಹತ್ತಿರ ಬರುತ್ತಿರುವ ಬೆನ್ನಲ್ಲೆ ರಾಗಿಗುಡ್ಡ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್​ ನಡೆಸ್ತಿದ್ದಾರೆ. ಇಷ್ಟೆ ಅಲ್ಲದೆ ಶ್ವಾನದಳ, ಬಾಂಬ್​ಸ್ಕ್ವಾಡ್​ ಹಾಗೂ ಡ್ರೋಣ್​ ಬಳಕೆಯನ್ನು ಆರಂಭಿಸಿ, ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲನೆ ನಡೆಲಾಗಿದೆ.

- Advertisement -

ನಿನ್ನೆ ದಿನ ಅಂದರೆ, ಆಗಸ್ಟ್ 4, 2025 ರಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ವಿಶೇಷ ಕಾರ್ಯಪಡೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ನಗರದ ಹಲವೆಡೆ ರೂಟ್​ ಮಾರ್ಚ್​ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
1002009988

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪಿಎಸ್‌ಐ ಸ್ವಪ್ನ ಅವರ ನೇತೃತ್ವದಲ್ಲಿ ರಾಗಿಗುಡ್ಡದ ಪ್ರಮುಖ ರಸ್ತೆಗಳು, ಸರ್ಕಲ್‌ಗಳು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

IMG 20250805 WA0020

ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪಿಎಸ್‌ಐ ಸಿದ್ದಪ್ಪ ಅವರ ನೇತೃತ್ವದಲ್ಲಿ, ಟಿಪ್ಪುನಗರದಿಂದ ರೂಟ್ ಮಾರ್ಚ್ ಆರಂಭಿಸಿ ವಿನಾಯಕ ವೃತ್ತ, ಟಿಪ್ಪು ನಗರ ಚಾನೆಲ್ ಮೂಲಕ ಕೆಳ ತುಂಗಾನಗರದಲ್ಲಿ ಮುಕ್ತಾಯಗೊಳಿಸಲಾಗಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ತಪಾಸಣೆ ಇನ್ನು ಹಬ್ಬಗಳ ಹಿನ್ನೆಲೆಯಲ್ಲಿ ಭದ್ರತೆಯನ್ನು ಖಾತರಿಪಡಿಸುವ ಸಲುವಾಗಿ, ಎಎಸ್‌ಸಿ ತಂಡ, ಶ್ವಾನದಳ ಮತ್ತು ಡ್ರೋನ್ ಕ್ಯಾಮರಾ ತಂಡಗಳು ನಗರದ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಿವೆ. ಹನುಮಂತ ನಗರ, ವೆಂಕಟೇಶ್ ನಗರ, ಚೌಡೇಶ್ವರಿ ದೇವಸ್ಥಾನದ ಬಳಿ, ಅಮೀರ್ ಅಹ್ಮದ್ ಕಾಲೋನಿ ಸೇರಿದಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಹಲವು ಸ್ಥಳಗಳಲ್ಲಿಯೂ ಭದ್ರತಾ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...