ಶಿವಮೊಗ್ಗ | 3 ತಿಂಗಳೊಳಗೆ ಬಿಜೆಪಿಯಲ್ಲಿ ರಾಜಕೀಯ ಕ್ರಾಂತಿ : ಶಾಸಕ ಗೋಪಾಲಕೃಷ್ಣ ಬೇಳೂರು

Date:

ಶಿವಮೊಗ್ಗ, ಬಿಜೆಪಿ ರಾಜ್ಯ ಘಟಕದಲ್ಲಿ ಆರ್. ಅಶೋಕ್ ಅವರಿಂದ ಹಿಡಿದು ಇನ್ನೂ ಬಹಳಷ್ಟು ನಾಯಕರಿಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ಪಕ್ಷದ ಪ್ರಮುಖ ಸ್ಥಾನಗಳಿಂದ ದೂರವಿಡಬೇಕು ಎಂಬ ಭಾವನೆ ಬಲವಾಗಿದ್ದು, ಮುಮದಿನ ಮೂರು ತಿಂಗಳಲ್ಲಿ ಬಿಜೆಪಿಯಲ್ಲಿ ಕ್ರಾಂತಿ ಆಗಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

- Advertisement -

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ 3 ತಿಂಗಳೊಳಗೆ ಬಿಜೆಪಿಯಲ್ಲಿ ರಾಜಕೀಯ ಕ್ರಾಂತಿ ನಡೆಯಲಿದೆ ಯಡಿಯೂರಪ್ಪ ಮತ್ತು ಅವರ ಮಕ್ಕಳು ಪಕ್ಷದ ನಾಯಕತ್ವದಿಂದ ದೂರವಾಗಬೇಕು ಎಂಬ ಆಶಯವನ್ನು ರಾಜ್ಯದ ಅನೇಕ ನಾಯಕರು ಹೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬಸನಗೌಡ ಪಾಟೀಲ್ ಯತ್ನಾಳ್, ಪ್ರಹ್ಲಾದ್ ಜೋಷಿ ಸೇರಿದಂತೆ ರಾಜ್ಯಮಟ್ಟದ ಅನೇಕ ನಾಯಕರ ಆಸೆ ಇದೇ ಆಗಿದೆ. ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಬಾರದು ಎಂಬ ಅಪೇಕ್ಷೆ ಬಹಳಷ್ಟು ನಾಯಕರಲ್ಲಿ ಮನೆ ಮಾಡಿದೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಕೇವಲ ಒಂದು ವಿಮಾನ ಮಾತ್ರ ಸಂಚರಿಸುತ್ತಿದ್ದು, ಅದು ಕೂಡ ಆಗಾಗ್ಗೆ ರದ್ದುಗೊಳ್ಳುವುದರಿಂದ ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಪ್ರಸ್ತುತ ಈ ವಿಮಾನ ನಿಲ್ದಾಣವು ತಮಿಳುನಾಡು, ಆಂಧ್ರಪ್ರದೇಶ ಮತ್ತು ಗೋವಾಗೆ ಪ್ರಯಾಣಿಸುವವರಿಗೆ ಹೆಚ್ಚು ಅನುಕೂಲವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು , ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿರುವುದು ಸಂತಸದ ಸಂಗತಿ. ಆದರೆ ಇಲ್ಲಿಂದ ತಮಿಳರಿಗೆ, ತೆಲುಗಿನವರಿಗೆ ಮತ್ತು ಗೋವಾಗೆ ಪ್ರಯಾಣಿಸುವವರಿಗೆ ಮಾತ್ರ ಹೆಚ್ಚು ಅನುಕೂಲವಾಗುತ್ತಿದೆ. ಆದರೆ ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿಗೆ ಕೇವಲ ಒಂದು ವಿಮಾನ ಮಾತ್ರ ಸಂಚರಿಸುತ್ತಿದೆ, ಆದರೆ ಚೆನ್ನೈ ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಗೆ ಎರಡೆರಡು ವಿಮಾನಗಳು ಸಂಚರಿಸುತ್ತಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...