ಶಿವಮೊಗ್ಗ | ಸೆಪ್ಟೆಂಬರ್ 1ರಿಂದ ರೈಲ್ವೇ ನಿಲ್ದಾಣದಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್ : ಜಿಲ್ಲಾಧಿಕಾರಿ ಮಾಹಿತಿ

Date:

ಶಿವಮೊಗ್ಗ, ಸಾರ್ವಜನಿಕ ಆಟೋ ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿಯಿಂದ ಮುಕ್ತಿಗೊಳಿಸಿ, ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ನಿರ್ಣಯ ಕೈಗೊಂಡಿದ್ದು, ಸೆಪ್ಟೆಂಬರ್ 1ರಿಂದಲೇ ಅನ್ವಯವಾಗುವಂತೆ ಆರಂಭದ ಹಂತವಾಗಿ ನಗರದ ರೈಲ್ವೇ ನಿಲ್ದಾಣದಿಂದ ಪ್ರೀಪೇಯ್ಡ್‌ಆಟೋ ಕೌಂಟರ್ಗಳನ್ನು ಪ್ರಾಯೋಗಿಕವಾಗಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

- Advertisement -

ಪ್ರೀಪೇಯ್ಡ್‌ಆಟೋ ಕೌಂಟರ್ಗಳನ್ನು ಆರಂಭಿಸುವ ಕುರಿತಂತೆ ಶುಕ್ರವಾರ ಏರ್ಪಡಿಸಲಾಗಿದ್ದ ಸಂಬಂಧಿತ ಇಲಾಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೊಲೀಸ್, ಸಾರಿಗೆ, ಮಹಾನಗರಪಾಲಿಕೆ ಇವರುಗಳ ಸಹಯೋಗದೊಂದಿಗೆ ಪ್ರೀಪೇಯ್ಡ್ ವ್ಯವಸ್ಥೆಯನ್ನು ಅನುಷ್ಟಾನಕ್ಕೆ ತರಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅದಕ್ಕೂ ಮುನ್ನ ಆಟೋ ಚಾಲಕರು ಮತ್ತು ಮಾಲೀಕರ ಅಭಿಪ್ರಾಯವನ್ನೂ ಪಡೆದು, ಸಾರ್ವಜನಿಕರು ಹಾಗೂ ಆಟೋ ಚಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಆರಂಭಿಕ ಹಂತದಲ್ಲಿ ರೈಲ್ವೇ ನಿಲ್ದಾಣದಲ್ಲಿ ಆಯ್ದ ಮೂರು ಸ್ಥಳಗಳಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್ಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಅದಕ್ಕಾಗಿ ನಗರ ಸ್ಥಳೀಯ ಸ್ವಯಂಸೇವಾ ಸಂಸ್ಥೆ ಚೈತನ್ಯ ರೂರಲ್ ಡೆವಲಪ್ಮೆಂಟ್ ಸೊಸೈಟಿಯ ವ್ಯವಸ್ಥಾಪಕರು ಆಸಕ್ತಿ ವಹಿಸಿದ್ದು, ಈಗಾಗಲೇ ಅದರ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದ ಅವರು, ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಹಾಗೂ ಸಹಕಾರವನ್ನು ಪಡೆದು ಕ್ರಮ ವಹಿಸಲಾಗುವುದು ಎಂದವರು ನುಡಿದರು.

ಈ ಪ್ರೀಪೇಯ್ಡ್‌ಆಟೋ ಕೌಂಟರ್‌ಗಳ ಆರಂಭದಿಂದ ನಗರದಲ್ಲಿನ ಸಾರ್ವಜನಿಕರು ಹಾಗೂ ನೆರೆಯ ಜಿಲ್ಲೆ, ತಾಲೂಕುಗಳಿಂದ ನಗರಕ್ಕೆ ವಿವಿಧ ಉದ್ದೇಶಗಳಿಗಾಗಿ ಆಗಮಿಸುವವರಿಗೆ ಅನುಕೂಲವಾಗಲಿದೆ ಎಂದ ಅವರು ಸುಗಮ ಸಂಚಾರ ವ್ಯವಸ್ಥೆಯಿಂದಾಗಿ ಶಿಸ್ತು ಮೂಡಲಿದೆ.

ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿರುವ ಈ ವ್ಯವಸ್ಥೆ ಯಶಸ್ವಿಯಾದಲ್ಲಿ ನಗರದ ಎಲ್ಲಾ ಪ್ರಮುಖ ವರ್ತುಲಗಳು, ಜನನಿಬಿಡ ಸ್ಥಳಗಳಿಗೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...