ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

Date:

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಬೃಹತ್ ಅಹಿಂದ ಸಮಾವೇಶ ನಡೆಸಲುದ್ದೇಶಿಸಲಾಗಿದ್ದು, ಇದರ ಪೂರ್ವಸಿದ್ಧತೆಯ ಸಭೆಯನ್ನು ಆ.23 ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಆರು ಜಿಲ್ಲೆಗಳ ಅಹಿಂದ ನಾಯಕರು ಇದರಲ್ಲಿ ಪಾಲ್ಗೊಳ್ಳುವರು ಎಂದು ಅಹಿಂದ ರಾಜ್ಯ ಸಂಚಾಲಕ ಸಾಗರದ ತೀ.ನ. ಶ್ರೀನಿವಾಸ್ ಹೇಳಿದರು.

- Advertisement -

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 1996ರಲ್ಲಿ 43 ಸಾವಿರ ಎಕರೆ ಜಮೀನನ್ನು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಿದೆ. ಅರಣ್ಯ ಇಲಾಖೆಯೇ 2೦ ಸಾವಿರ ಕುಟುಂಬಗಳಿಗೆ ಜಮೀನು ಮಂಜೂರು ಮಾಡಬೇಕೆಂದು ಶಿಫಾರಸ್ಸು ಮಾಡಿ, 25 ವರ್ಷಗಳಾದರೂ ಒಂದೂ ಕುಟುಂಬಕ್ಕೂ ಜಮೀನು ಮಂಜೂರಾತಿ ನೀಡಿಲ್ಲ. ರೈತರ ದಾಖಲೆ ಅರಣ್ಯಭವನದಲ್ಲಿ ನಾಶವಾಗಿದೆ ಎಂದು ಹೇಳುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿದ್ಯುತ್ ಯೋಜನೆ, ಕೃಷಿಗಾಗಿ ಅಣೆಕಟ್ಟು ಕಟ್ಟಲು ತಮ್ಮ ಭೂಮಿ, ಮನೆಗಳನ್ನು ತ್ಯಾಗಮಾಡಿದ ಶರಾವತಿ, ತುಂಗಭದ್ರ, ವರಾಹಿ, ಚಕ್ರಾ, ಸಾವೇಹಕ್ಲು, ಅಂಬ್ಲಿಗೊಳ ಮುಳುಗಡೆ ಸಂತ್ರಸ್ಥರಿಗೆ ಇನ್ನೂ ಜಮೀನು ಕೊಟ್ಟಿಲ್ಲ. ಅಹಿಂದ ವರ್ಗದವರು ಶೇ.೭೫ರಷ್ಟು ಜನಸಂಖ್ಯೆ ಇದ್ದರೂ ದೇಶದಲ್ಲಿ ಸಾಮಾಜಿಕ ನ್ಯಾಯ ಕೊಟ್ಟಿಲ್ಲ ಎಂದರು.

ವಿ.ಪಿ. ಸಿಂಗ್, ಮಂಡಲ್ ವರದಿ ಜಾರಿ, ದೇವರಾಜ ಅರಸು ಹಾಗೂ ಹಾವನೂರು ಆಯೋಗದ ವರದಿ ಜಾರಿ ಮಾಡಿದ್ದು ಬಿಟ್ಟರೆ ಬೇರೆ ಯಾವ ಜನಪ್ರತಿನಿಧಿಗಳು ಈ ಬಗ್ಗೆ ಕಾರ್ಯ ಮಾಡಿಲ್ಲ.

ಕಾಂತ್‌ರಾಜ್ ಆಯೋಗ ವರದಿ, ಅಂಕಿಅಂಶ 1೦ ವರ್ಷದ ಹಿಂದಿನದ್ದು ಎಂದು ಹೇಳಿ ಸರ್ಕಾರ ಘೋಷಿಸಿದೆ. ಸರ್ಕಾರ ಸಾಮಾಜಿಕ ಹೊಸದಾಗಿ ಸರ್ವೆ ಮಾಡುವುದಾಗಿ ನ್ಯಾಯಕ್ಕೆ ಸಂಚಕಾರ ತಂದಿದ್ದು ಸಾಮಾಜಿಕ ಹೋರಾಟ ನ್ಯಾಯ ನೀಡಬೇಕು ಅದನ್ನು ಪಡೆಯುವ ಮಾಡಲು ತೀರ್ಮಾನ ಮಾಡಬೇಕಾಗಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...

ಉಡುಪಿ | ಕಂಡ್ಲೂರಿನಲ್ಲಿ ಹೋಂ ಸ್ಟೇ ಎನ್‌ಒಸಿಗೆ ₹5 ಸಾವಿರ ಲಂಚ: ವಿಎ ಲೋಕಾಯುಕ್ತ ಬಲೆಗೆ

ಕಂಡ್ಲೂರಿನಲ್ಲಿ ನಿರ್ಮಾಣವಾಗಲಿರುವ ಹೋಂ ಸ್ಟೇಗೆ ನಿರಪೇಕ್ಷಣಾ ಪತ್ರ (ಎನ್‌ಒಸಿ) ನೀಡಲು ₹5...

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...