ಶಿವಮೊಗ್ಗ, ದೇವನಹಳ್ಳಿಯಲ್ಲಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ಮುಖಂಡರನ್ನು ಬಂಧಿಸಿರುವುದನ್ನು ವಿರೋಧಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಸಂಯುಕ್ತ ಹೋರಾಟದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸರ್ಕಾರ ರೈತರ ಜಮೀನುಗಳನ್ನು ಭೂಸ್ವಾಧೀನ ಮಾಡಿಕೊಂಡಿರುವುದನ್ನು ವಿರೋಧಿಸಿ, ದೇವನಹಳ್ಳಿಯಲ್ಲಿ ರೈತರು ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು.
ಆದರೂ ಕೂಡ ವಿಪರೀತ ಪೊಲೀಸ್ ಬಲ ಬಳಸಿ ವೇದಿಕೆಯ ಮೇಲಿದ್ದ ಮುಖಂಡರನ್ನು ಹಾಗೂ ಪ್ರತಿಭಟನಾನಿರತ ಮಹಿಳೆಯರನ್ನು ಒಳಗೊಂಡಂತೆ ಅನಾಗರೀಕವಾಗಿ ಎಳೆದಾಡಿ, ಬಂಧಿಸಿರುವುದು ಅತ್ಯಂತ ಖಂಡನೀಯ ಎಂದು ಪ್ರತಿಭಟನಾಕಾರರು ತಿಳಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಟಿ.ಎಂ ಚಂದ್ರಪ್ಪ,ರಾಜ್ಯ ಮಹಿಳಾ ಘಟಕದ ಭಾಗ್ಯ ರಾಘವೇಂದ್ರ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್,ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಂಜಪ್ಪ, ಎಂ.ಎಸ್ ತಿಮ್ಮಪ್ಪ, ಹುಲಿಮಟ್ಟಿ ಜಯಣ್ಣ, ಪಿ.ಶೇಖರಪ್ಪ,ಜಿಲ್ಲಾ ಕಾರ್ಯದರ್ಶಿ ಗುರುಶಾಂತ,ಜಿಲ್ಲಾ ಹಸಿರುಸೇನೆ ಸಂಚಾಲಕರಾದ ಎಂ.ಡಿ ನಾಗರಾಜ್,ಶಿವಮೊಗ್ಗ ತಾ|| ಅಧ್ಯಕ್ಷರಾದ ಸಿ.ಚಂದ್ರಪ್ಪ,ತಾ|| ಪ್ರಧಾನ ಕಾರ್ಯದರ್ಶಿ ಜ್ಞಾನೇಶ್,ಭದ್ರಾವತಿ ತಾ|| ಪ್ರಧಾನ ಕಾರ್ಯದರ್ಶಿ ಸಿ.ಬಿ ಹನುಮಂತಪ್ಪ,CITU ಜಿಲ್ಲಾ ಸಂಚಾಲಕರಾದ ಎಂ.ನಾರಾಯಣ,CITU ಬಿಸಿ ಊಟದ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಹನುಮಮ್ಮ, ಡಿ.ಎಸ್.ಎಸ್ ಮುಖಂಡರಾದ ಶಿವಕುಮಾರ್, ಶೇಷಪ್ಪ, ಪರಮೇಶ್, ಪುಟ್ಟರಾಜು, ಹನುಮಂತಪ್ಪ ಮೊದಲಾದವರು ಉಪಸ್ಥಿತರಿದ್ದರು.