ಶಿವಮೊಗ್ಗ | ದ್ರೋಹ, ವಂಚನೆ ಆರೋಪಿಗಳಿಗೆ ಶಿಕ್ಷೆ

Date:

Advertisements

ದ್ರೋಹ, ವಂಚನೆ ಪ್ರಕರಣದಲ್ಲಿ ಆರೋಪಿತರಾಗಿದ್ದ ಬೊಮ್ಮನಕಟ್ಟೆಯ ಜಯಮ್ಮ ಮತ್ತು ವಂದನಾ ಟಾಕೀಸ್ ಕೆ.ಆ‌ರ್.ಪುರಂ ರಸ್ತೆ ವಾಸಿ ಮಾರುತಿಯನ್ನು ನ್ಯಾಯಾಲಯ 2 ವರ್ಷದ ಸಾದಾ ಕಾರಾಗೃಹ ವಾಸ ಹಾಗೂ ತಲಾ 22 ಸಾವಿರ ₹ ಗಳ ದಂಡ ವಿಧಿಸಿ ಆದೇಶಿಸಿದೆ.

2018 ನೇ ಸಾಲಿನಲ್ಲಿ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದ್ರೋಹ, ವಂಚನೆ ಗೆ ಸಂಬಂಧಿಸಿದಂತೆ ಗುನ್ನೆ ಸಂಖ್ಯೆ 0079/2018 406, 420, 323, 342,504, 506, 114 ಸಹಿತ 34 ಐಪಿಸಿ ಪ್ರಕರಣ ದಾಖಲಾಗಿರುತ್ತದೆ.

ಆಗಿನ ತನಿಖಾಧಿಕಾರಿ ಗಳಾದ ದೇವರಾಜ ಜಿ. ಪೊಲೀಸ್‌ ಇನ್ಸಪೆಕ್ಟರ್, ಮಹಿಳಾ ಠಾಣೆ* ರವರು ತನಿಖೆಯನ್ನು ಪೂರ್ಣಗೊಳಿಸಿ ಘನ 2 ನೇ ಜೆ.ಎಂ.ಎಫ್.ಸಿ ನ್ಯಾಯಾಲಯ, ಶಿವಮೊಗ್ಗಕ್ಕೆ ಆರೋಪಿತರ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.

Advertisements
1001524506

ಘನ ಸರ್ಕಾರದ ಪರವಾಗಿ ಕಿರಣ್ ಕುಮಾ‌ರ್ ಸರ್ಕಾರಿ ಅಭಿಯೋಜಕರು ಪ್ರಕರಣದ ವಾದವನ್ನು ಮಂಡಿಸಿದ್ದು ಘನ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿತರಾದ ಶ್ರೀಮತಿ ಜಯಮ್ಮ, 67 ವರ್ಷ, ಬೊಮ್ಮನಕಟ್ಟೆ, ಶಿವಮೊಗ್ಗ ಮತ್ತು ಮಾರುತಿ, 49 ವರ್ಷ, ವಂದನಾ ಟಾಕೀಸ್, ಕೆ. ಆ‌ರ್. ಪುರಂ, ಶಿವಮೊಗ್ಗ ಇವರ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ದಿನಾಂಕ 22 ಏಪ್ರಿಲ್ 2025 ನ್ಯಾಯಾಧೀಶರಾದ ಶ್ರೀಮತಿ ಶಾರದಾ ಕೊಪ್ಪದರವರು ಆರೋಪಿತರಿಗೆ ತಲಾ 02 ವರ್ಷ ಸಾದಾ ಕಾರವಾಸ ಹಾಗೂ ತಲಾ 22,000/- ರೂ ದಂಡ ದಂಡ ಕಟ್ಟಲು ವಿಫಲವಾದಲ್ಲಿ 06 ತಿಂಗಳ ಸಾದಾ ಕಾರವಾಸ ಶಿಕ್ಷೆ ವಿಧಿಸಿ ಆದೇಶಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X