ಶಿವಮೊಗ್ಗ | ರೈಲ್ವೆ ಟಿಕೆಟ್ ದರ ಏರಿಕೆ ತತ್ತಕ್ಷಣ ಹಿಂಪಡೆಯಬೇಕು : ಕಾಂಗ್ರೆಸ್ ಮುಖಂಡೆ ರೇಖಾ ರಂಗನಾಥ್ ಆಗ್ರಹ

Date:

ಶಿವಮೊಗ್ಗ, ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ.

- Advertisement -

ಕೇಂದ್ರ ಸರ್ಕಾರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಎಲ್ಲಾ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ಎಂದರು.

ರೈಲ್ವೆ ಇಲಾಖೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿದ್ದು, ಪ್ರಪಂಚದಲ್ಲಿಯೇ ಅತ್ಯಂತ ಹೆಚ್ಚು ಪ್ರಯಾಣಿಕರು ಸಂಚರಿಸುವ ಈ ಸಾರಿಗೆ ವ್ಯವಸ್ಥೆ ಈಗಲೂ ಲಾಭದಾಯಕವಾಗಿದೆ. ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಬಜೆಟ್ ಮಂಡನೆಯ ಪದ್ಧತಿಯನ್ನು ನರೇಂದ್ರ ಮೋದಿ ಸರ್ಕಾರ ಕೈಬಿಟ್ಟಿರುವ ಕಾರಣ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯೇ ಇಲ್ಲದಂತಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೊದಲು ಇಲಾಖೆಯ ಕಾರ್ಯ ನಿರ್ವಹಣೆಯ ಬಗ್ಗೆ ಶ್ವೇತಪತ್ರವನ್ನು ದೇಶದ ಜನತೆಯ ಮುಂದಿಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದರು.

ಕೇಂದ್ರ ಬಿಜೆಪಿ ಸರ್ಕಾರ ತತ್ತಕ್ಷಣದಲ್ಲಿ ಬೆಲೆ ಏರಿಕೆಯನ್ನು ಹಿಂಪಡೆಯದಿದ್ದಲ್ಲಿ ಜನಸಾಮಾನ್ಯರು ರಸ್ತೆಗೆಳಿದು ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನ. 5ರಂದು ‘ವೋಟ್ ಬಚಾವ್ ದೇಶ ಬಚಾವ್’ ಪ್ರತಿಭಟನೆ 

ಎಐಸಿಸಿ ಕರೆ ಹಾಗೂ ಕೆಪಿಸಿಸಿ ನಿರ್ದೇಶನದ ಮೇರೆಗೆ ದಿನಾಂಕ 05 -11-26...

ಚಿಕ್ಕಮಗಳೂರು | ಸಂಪರ್ಕ ರಸ್ತೆ ಸೇತುವೆ ಕಾಮಗಾರಿ ವಿಳಂಬ: ರಸ್ತೆ ತಡೆಹಿಡಿದ ಗ್ರಾಮಸ್ಥರು

ಜಿಲ್ಲೆಯ ಕೊಪ್ಪ ತಾಲೂಕಿನ ಅತ್ತಿಕೋಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಣಸಿನಹಾಡ್ಯ– ಹೊರಿಕೊಂಡ...

ಮೈಸೂರು | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ

ಕಬ್ಬು ಬೆಳೆಗಾರರ ನ್ಯಾಯಯುತ ಹಕ್ಕೊತ್ತಾಯಗಳನ್ನು ಈಡೇರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು...

ಉಡುಪಿ‌ | ಬೈಲೂರು ವಾರ್ಡಿನ ರಸ್ತೆಗೆ ಶೀಘ್ರ ಡಾಮರೀಕರಣಕ್ಕೆ ಆಗ್ರಹಿಸಿ ಪೌರಾಯುಕ್ತರಿಗೆ ಮನವಿ

31ನೇ ಬೈಲೂರು ವಾರ್ಡಿನ ಶ್ರೀನಿವಾಸ ದೇವಸ್ಥಾನದ ಮುಖ್ಯರಸ್ತೆಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ...