ಶಿವಮೊಗ್ಗ | ಮಳೆ ಆರ್ಭಟಕ್ಕೆ ಗುಡ್ಡ ಕುಸಿತ; ಮಗು ಸೇರಿ ಮೂವರ ದುರ್ಮರಣ

Date:

ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು ಮಗು ಸೇರಿ ಒಂದೇ ಕುಟುಂಬದ ಮೂವರು ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ನಡೆದಿದೆ.

- Advertisement -

ತಡರಾತ್ರಿ ಸುಮಾರು 2:30ರ ವೇಳೆಗೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು, ಕೆಳಭಾಗದಲ್ಲಿದ್ದ ಶೆಡ್ ಮೇಲೆ ಮಣ್ಣಿನ ರಾಶಿ ಬಿದ್ದಿದೆ. ಪರಿಣಾಮ ಶೆಡ್‌ನಲ್ಲಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (35), ನಾಗವೇಣಿ (28) ಹಾಗೂ ಸಂತೋಷ್ (3) ಸ್ಥಳದಲ್ಲೇ ಅಸುನೀಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ತೀರ್ಥಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪಕ್ಕದ ಶೆಡ್‌ನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು, ಕೊಡಗು ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ಭಾಗಮಂಡಲದ ಸ್ನಾನಘಟ್ಟ, ತ್ರಿವೇಣಿ ಸಂಗಮ ಹಾಗೂ ಉದ್ಯಾನವನಗಳು ಸಂಪೂರ್ಣ ಜಲಾವೃತವಾಗಿವೆ. ಭಾಗಮಂಡಲ-ತಲಕಾವೇರಿ ರಸ್ತೆ ಮುಳುಗಡೆಯಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಫ್ಲೈ ಓವರ್ ಮೂಲಕ ಸಂಚಾರ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...