ಶಿವಮೊಗ್ಗ | ಸಾಲ ಬಡ್ಡಿಮನ್ನಾದ 15 ಕೋಟಿ ರೂ. ಬಾಕಿಯನ್ನು ಡಿಸಿಸಿ ಬ್ಯಾಂಕಿಗೆ ಬಿಡುಗಡೆ ಮಾಡಿ : ಕಲ್ಲೂರು ಮೇಘರಾಜ್

Date:

ಶಿವಮೊಗ್ಗ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸರ್ಕಾರ ಪ್ರಕಟಿಸಿದ ಮಧ್ಯಮಾವಧಿ ಕೃಷಿ ಸಾಲ (ಎಂ.ಐ.ಎಲ್.) ದ ಬಡ್ಡಿ ಹಣ ಮನ್ನಾ ಯೋಜನೆಯ 2.52 ಕೋಟಿ ರೂಪಾಯಿಗಳನ್ನು ಹಾಗೂ 2018 ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದ ಸಾಲ ಮನ್ನಾ ಯೋಜನೆಯ ಜಿಲ್ಲೆಯ 1956 ರೈತ ಫಲಾನುಭವಿಗಳ 12.54 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಆಗ್ರಹಿಸಿದೆ.

- Advertisement -

ಸುದ್ದಿಗೊಷ್ಟಿಯಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರದ ಟ್ರಸ್ಟಿ ಕಲ್ಲೂರು ಮೇಘರಾಜ, ಇದರಿಂದ ರೈತರು ಡಿ.ಸಿ.ಸಿ. ಬ್ಯಾಂಕ್‌ಗಳಲ್ಲಿ ಅಡಮಾನ ಮಾಡಿರುವ ತಮ್ಮ ಭೂದಾಖಲೆಗಳನ್ನು ವಾಪಾಸ್ ಪಡೆದು, ಮುಂದಿನ ಕೃಷಿ ಚಟುವಟಿಕೆಗೆ ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ಅನುಕೂಲಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಧ್ಯಮಾವಧಿ ಕೃಷಿ ಸಾಲದ ಸಿದ್ದರಾಮಯ್ಯನವರ ಸರ್ಕಾರ 2023 ರಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ರೈತರ ಮಾಡಿದ್ದರಿಂದ ಶಿವಮೊಗ್ಗ ಜಿಲ್ಲೆಯ 144 ರೈತ ಫಲಾನುಭವಿಗಳು ಸಾಲದ ಅಸಲು ಹಣವನ್ನು ಪಾವತಿಸಿದ್ದು, (ಎಂ.ಐ.ಎಲ್.) ಬಡ್ಡಿ ಹಣವನ್ನು ಮನ್ನಾ ಮಾಡುವುದಾಗಿ ಘೋಷಣೆ ಬಡ್ಡಿ ಮನ್ನಾ ಯೋಜನೆಯ ರೂ.2.52 ಕೋಟಿ ಬಾಕಿ ಹಣ ಬಿಡುಗಡೆಯಾಗದೇ ರೈತರು ಜಿಲ್ಲೆಯಲ್ಲಿ ಡಿ.ಸಿ.ಸಿ. ಬ್ಯಾಂಕ್‌ಗೆ ಅಡಮಾನ ಮಾಡಿದ ದಾಖಲೆಗಳನ್ನು ವಾಪಾಸ್ ಪಡೆಯದೇ ಬೇರೆ ವಾಣಿಜ್ಯ ಬ್ಯಾಂಕಿನಲ್ಲೂ ಸಾಲ ಪಡೆಯದ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದಾರೆ.

ಅದೇ ರೀತಿ 2018 ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ಹೆಚ್.ಡಿ. ಕುಮಾರಸ್ವಾಮಿಯವರು ಸಾಲ ಮನ್ನಾ ಯೋಜನೆಯನ್ನು ಘೋಷಣೆ ಮಾಡಿದಾಗ ಜಿಲ್ಲೆಯಲ್ಲಿ 1956 ಫಲಾನುಭವಿಗಳಿಗೆ 12.54 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕಾಗಿದೆ ಎಂದರು.

ಭದ್ರಾವತಿ ತಾಲ್ಲೂಕಿಗೆ ರೂ.2.52 ಕೋಟಿ, ಹೊಸನಗರ ತಾಲ್ಲೂಕಿಗೆ ರೂ.2.62 ಕೋಟಿ, ಸಾಗರ ತಾಲ್ಲೂಕಿಗೆ ರೂ.1.32 ಕೋಟಿ, ಶಿಕಾರಿಪುರ ತಾಲ್ಲೂಕಿಗೆ ರೂ.0.52 ಕೋಟಿ, ಶಿವಮೊಗ್ಗ ತಾಲ್ಲೂಕಿಗೆ ರೂ. 3.27 ಕೋಟಿ, ಸೊರಬ ತಾಲ್ಲೂಕಿಗೆ ರೂ. 3.07 ಕೋಟಿ ಹಾಗೂ ತೀರ್ಥಹಳ್ಳಿ ರೂ.1.55 ಕೋಟಿ ಸೇರಿ ಒಟ್ಟು 12.54 ಕೋಟಿ ತಾಲ್ಲೂಕಿಗೆ ರೂಪಾಯಿಗಳನ್ನು ಬಾಕಿ ಹಣ ಬಿಡುಗಡೆ ಮಾಡಬೇಕಾಗಿದೆ ಎಂದರು.

ಹೆಚ್.ಡಿ. ಕುಮಾರಸ್ವಾಮಿಯವರು ನಾನು ಮಣ್ಣಿನ ಮಗ ಎಂದು ಘೋಷಣೆ ಮಾಡಿಕೊಂಡು, ಸಾಲ ಮನ್ನಾ ಯೋಜನೆಯ ಹರಿಕಾರ ಎಂದು ಟಾಂ ಟಾಂ ಎಂದು ಸಾರುತ್ತಾ ಹೋದರು. ಆದರೆ ತಾವೇ ಘೋಷಣೆ ಮಾಡಿದ ಸಾಲ ಮನ್ನಾ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ 1956 ರೈತ ಫಲಾನುಭವಿಗಳಿಗೆ 12.54 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡದೇ ಇರುವುದು ರೈತ ಕುಟುಂಬಗಳಿಗೆ ಕುಮಾರಸ್ವಾಮಿಯವರು ಮಾಡಿದ ಅನ್ಯಾಯವಾಗಿದೆ ಎಂದರು.

ನಂತರ 2019 ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರಾಗಲೀ ಶಿವಮೊಗ್ಗ ಜಿಲ್ಲೆಯ 1956 ರೈತ ಫಲಾನುಭವಿಗಳಿಗೆ ಸಾಲ ಮನ್ನಾ ಯೋಜನೆಯ 12.54 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡದೇ ಅನ್ಯಾಯ ಮಾಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಜನಮೇಜಿರಾವ್, ಶಂಕ್ರಾ ನಾಯ್ಕ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...