ಶಿವಮೊಗ್ಗ | ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು : ಎಸ್ಪಿ ಮಿಥುನ್ ಕುಮಾರ್ ಖಡಕ್ ಸೂಚನೆ

Date:

ಶಿವಮೊಗ್ಗ ‘ರೌಡಿಸಂ ಚಟುವಟಿಕೆ ಮಟ್ಟ ಹಾಕಬೇಕು. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವ ರೌಡಿ ಆಸಾಮಿಗಳ ವಿರುದ್ದ ಕ್ರಮಕೈಗೊಳ್ಳಬೇಕು’ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

- Advertisement -

ನಗರದ ಡಿಎಆರ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಪೊಲೀಸ್ ಉಪ ವಿಭಾಗಗಳ ಡಿವೈಎಸ್ಪಿ, ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಗಳೊಂದಿಗೆ ನಡೆಸಿದ ಅಪರಾಧ ವಿಮರ್ಶನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
1002376892

ಕಾನೂನು – ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಅಪರಾಧ ಚಟುವಟಿಕೆ ಘಟಿಸುವುದಕ್ಕೂ ಮುನ್ನವೇ ಮಾಹಿತಿ ಸಂಗ್ರಹಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಸಂಘಟಿತ ಅಪರಾಧಗಳ ನಿಯಂತ್ರಣಕ್ಕೆ ನಿಯಮಿತವಾಗಿ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಬೇಕು ಎಂದು ತಿಳಿಸಿದ್ದಾರೆ.

ವಿಳಂಬಕ್ಕೆ ಆಸ್ಪದವಾಗದಂತೆ, ಕಾಲಮಿತಿಯೊಳಗೆ ಅಪರಾಧ ಪ್ರಕರಣಗಳ ತನಿಖೆ ಪೂರ್ಣಗೊಳಿಸಬೇಕು. ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸುವ ಕಾರ್ಯ ನಡೆಸಬೇಕು ಎಂದು ಇದೇ ವೇಳೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

1002372614

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎ ಜಿ ಕಾರ್ಯಪ್ಪ, ರಮೇಶ್ ಕುಮಾರ್, ಸಾಗರ ಉಪ ವಿಭಾಗದ ಎಎಸ್ಪಿ ಬೆನಕ ಪ್ರಸಾದ್, ಡಿಎಆರ್ ಡಿವೈಎಸ್ಪಿ ದಿಲೀಪ್, ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪಿ ಬಾಬು ಆಂಜನಪ್ಪ,ಶಿವಮೊಗ್ಗ ಬಿ ಉಪ ವಿಭಾಗದ ಡಿವೈಎಸ್ಪಿ ಸಂಜೀವ್ ಕುಮಾರ್, ಭದ್ರಾವತಿ ಉಪ ವಿಭಾಗದ ಡಿವೈಎಸ್ಪಿ ನಾಗರಾಜ್, ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಸಿಇಎನ್ ಠಾಣೆ ಡಿವೈಎಸ್ಪಿ ಕೃಷ್ಣಮೂರ್ತಿ ಸೇರಿದಂತೆ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...