ಶಿವಮೊಗ್ಗ | ನವದೆಹಲಿಯ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ; ಸಾಗರದ ಪ್ರಗತಿಪರ ಕೃಷಿಕ ದಂಪತಿ

Date:

ಶಿವಮೊಗ್ಗ, ದೆಹಲಿಯಲ್ಲಿ ಈ ಬಾರಿ ನಡೆಯಲಿರುವ ಸ್ವಾತ್ರಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾಗರ ತಾಲ್ಲೂಕಿನ ದಂಪತಿಯೊಬ್ಬರಿಗೆ ವಿಶೇಷ ಆಹ್ವಾನ ಲಭಿಸಿದೆ.

- Advertisement -

ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ಉಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಚಾಲೆ ಗ್ರಾಮದ ಪ್ರಗತಿಪರ ರೈತ ಹಾಗೂ ಆಯುರ್ವೇದ ಸಸ್ಯಗಳ ಸಂರಕ್ಷಕ ಪ್ರಕಾಶ್‌ ರಾವ್‌ ಮಂಚಾಲೆ ಮತ್ತು ಅವರ ಪತ್ನಿ ಶಾಂತಾ ಅವರಿಗೆ ಗೌರವಪೂರ್ವಕವಾಗಿ ಕೇಂದ್ರ ಸರ್ಕಾರ ಸ್ವತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಭಾರತೀಯ ಆಯುಷ್ ಇಲಾಖೆ ಪ್ರಕಾಶ್‌ ರಾವ್‌ ಅವರ ಸಾಧನೆಯನ್ನು ಗೌರವಿಸಿ ಈ ಆಹ್ವಾನ ನೀಡಿದೆ.

1002047143

ಪ್ರಕಾಶ್​ರವರು ಎರಡು ಎಕರೆ ಜಮೀನಿನಲ್ಲಿ ಕಾಳುಮೆಣಸು, ಮಧುನಾಶಿನಿ, ಕ್ಯಾನ್ಸರ್ ರೋಗಕ್ಕೆ ಔಷಧಿಯಾದ ನ್ಯಾಪಿಯ, ಮಧುಮೇಹಕ್ಕೆ ಸಹಕಾರಿಯಾಗಿರುವ ವಿನಾಯಕ ಬಳ್ಳಿ, ಅರಿಶಿನ, ದಾಲ್ಚಿನ್ನಿ, ನಿಂಬೆ ಸೇರಿ ಹಲವಾರು ಗಿಡಮೂಲಿಕೆ ಸಸ್ಯಗಳನ್ನು ಬೆಳಯುತ್ತಿದ್ದಾರೆ.

ಆರ್ಯುವೇದಕ್ಕೆ ಸಂಬಂಧಿಸಿದಂತೆ ವಿಶೇಷ ಜ್ಞಾನ ಹೊಂದಿರುವ ಇವರ ಕೃಷಿ ವಿಧಾನವನ್ನು ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗಿದೆ.

ಉತ್ತಮ ಕೃಷಿಕ ಹೆಸರಿನ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಪಡೆದಿರುವ ಇವರನ್ನು ಗುರುತಿಸಿ ಭಾರತೀಯ ಆಯುಷ್ ಇಲಾಖೆಯು ಗಿಡಮೂಲಿಕೆ ಸಸ್ಯಗಳನ್ನು ಬೆಳೆಸುವ ಕಾರ್ಯಕ್ರಮಗಳಲ್ಲಿ ಕೈ ಜೋಡಿಸಿದೆ ಮತ್ತು ಈ ಬಾರಿಯ ಸ್ವತಂತ್ರೊತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...