ಶಿವಮೊಗ್ಗ | ನ. 8, 9ರಂದು ʼಸಮೃದ್ಧಿ 2025ʼ ಕಾರ್ಯಾಗಾರ

Date:

ಶಿವಮೊಗ್ಗ ಜಿಲ್ಲೆಯ ರೋಟರಿ ಕ್ಲಬ್ ಪೂರ್ವ ಸಂಸ್ಥೆ ಸಾರಥ್ಯದಲ್ಲಿ ನಗರದ ಶಿವಮೊಗ್ಗ ಅರೆಕಾನಟ್ ಮರ್ಚೆಂಟ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನ. 8 ಮತ್ತು 9ರಂದು ರೋಟರಿ ದತ್ತಿನಿಧಿ ಮತ್ತು ಪೊಲಿಯೋ ಪ್ಲಸ್ ಕುರಿತ ʼಸಮೃದ್ಧಿ 2025ʼ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಕಾರ್ಯಾಗಾರ ಚೇರ್ಮನ್ ಚಂದ್ರಹಾಸ್ ರಾಯ್ಕರ್, “ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಒಳಗೊಂಡು ಸಮೃದ್ಧಿ 2025 ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ನಾಲ್ಕು ಜಿಲ್ಲೆಗಳಿಂದ 700ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಳ್ಳಲಿದ್ದಾರೆ. ರವಿಶಂಕರ್ ದಾಕೋಜು ನವೆಂಬರ್ 8ರಂದು ಸಂಜೆ 5.30ಕ್ಕೆ ನಿಯೋಜಿತ ಜಿಲ್ಲಾ ಗವರ್ನರ್ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಜಿಲ್ಲಾ ಗವರ್ನರ್ ಕೆ ಪಾಲಾಕ್ಷ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಜಿಲ್ಲಾ ಗವರ್ನ‌ರ್ ಸಾಂಬಶಿವ ರಾವ್ ಪತಿಬಂಧ, ರಾಜಾರಾಮ್ ಭಟ್ ಬಿ, ಡಿ ಎಸ್ ರವಿ, ಬಿ ಎನ್ ರಮೇಶ್, ಜಿಲ್ಲಾ ಗವರ್ನರ್ ಬಿ ಎಂ ಭಟ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ಗವರ್ನರ್ ಲಕ್ಷಣಗೌಡ ಬಿ, ವಲಯ 10ರ ಸಹಾಯಕ ಗವರ್ನ‌ರ್ ಕೆ ಪಿ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು” ಎಂದು ವಿವರಿಸಿದರು.

ಇದನ್ನೂ ಓದಿ: ಶಿವಮೊಗ್ಗ | ಕನ್ನಡ ಭಾಷೆಗೆ ವಿಶಿಷ್ಟವಾದ ಸ್ಥಾನವಿದೆ : ಪ್ರೊ. ಶರತ್ ಅನಂತಮೂರ್ತಿ

ನ.‌9ರ ಬೆಳಗ್ಗೆ 9:30ರಿಂದ ಡಾ. ಆರ್ ಎಸ್ ನಾಗಾರ್ಜುನ ಮತ್ತು ವಿನಯ್‌ ಕುಮಾರ್ ಪೈ, ಕೆ ಕೃಷ್ಣ ಶೆಟ್ಟಿ, ಕಾಶಿನಾಥ್ ಪ್ರಭು, ಡಾ. ನಾರಾಯಣ ಅವರು ಉಪನ್ಯಾಸ ನೀಡಲಿದ್ದಾರೆ.

“ನವೆಂಬರ್ 9ರಂದು ಮಧ್ಯಾಹ್ನ 1ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಕಾರ್ಯಗಾರದ ಚೇರ್ಮನ್ ಆಗಿ ಚಂದ್ರಹಾಸ್ ಪಿ ರಾಯ್ಕರ್, ಕಾರ್ಯದರ್ಶಿಯಾಗಿ ಡಾ. ಗುಡದಪ್ಪ ಕಸಬಿ, ಪ್ರಮೋಷನ್ ಕಮಿಟಿ ಚೇರ್ಮನ್ ಜಿ ವಿಜಯಕುಮಾರ್, ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಡಿ ಕಿಶೋರ್ ಕುಮಾರ್, ಕಾರ್ಯದರ್ಶಿ ಧನಂಜಯ ರಾಂಪುರ, ಡಿ ಎಂ ಜಲೇಂದ್ರ, ಪ್ರದೀಪ್ ಜಿ ಎಸ್ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿರುವರು” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...