ಶಿವಮೊಗ್ಗ | ಚೌಲಿಹಳ್ಳಿಯ ಸಂದೀಪ ಅವರಿಗೆ ಪಿಎಚ್‌ಡಿ ಪದವಿ

Date:

ಜೀವನೋಪಾಯಕ್ಕಾಗಿ ದಿನಗೂಲಿ ಕೆಲಸ ಮಾಡುತ್ತಿದ್ದ ಪೋಷಕರ ಮಗನಾದ ಚಿತ್ರದುರ್ಗ ತಾಲೂಕಿನ ಚೌಲಿಹಳ್ಳಿ ಗ್ರಾಮದ ಸಂದೀಪ ಎಲ್ ಅವರು ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಅದ್ಭುತ ಸಾಧನೆಯನ್ನು ದಾಖಲಿಸಿದ್ದಾರೆ. ಅತ್ಯಂತ ಸರಳ ಕುಟುಂಬದಲ್ಲಿ ಹುಟ್ಟಿ ಬೆಳೆದ ಸಂದೀಪ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ ನೀಡುವ ಡಾಕ್ಟರೇಟ್ (ಪಿಎಚ್‌ಡಿ) ಪದವಿಗೆ ಪಾತ್ರರಾಗಿದ್ದಾರೆ.

- Advertisement -

ಕೂಲಿ ಕಾರ್ಮಿಕರಾದ ಲೋಕೇಶ್ವರಪ್ಪ ಹಾಗೂ ತಿಪ್ಪಮ್ಮ ದಂಪತಿಗಳ ಪುತ್ರನಾದ ಸಂದೀಪ ಅವರು, ಬಡತನದ ನಡುವೆಯೂ ಗಟ್ಟಿಯಾದ ಕನಸು, ದುಡಿಮೆ ಮತ್ತು ಅಧ್ಯಯನಶೀಲತೆಯನ್ನು ಮೈಗೂಡಿಸಿಕೊಂಡಿದ್ದರು. ‘ಶಿಕ್ಷಕರ ಶಿಕ್ಷಣ ಸಂಸ್ಥೆಗಳ ಸಾಂಸ್ಥಿಕ ವಾತಾವರಣ, ಪ್ರಶಿಕ್ಷಕರ ವೃತ್ತಿ ನೈತಿಕತೆ ಮತ್ತು ಪ್ರಶಿಕ್ಷಕರ-ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಂಬಂಧಗಳ ಅಧ್ಯಯನ’ ಎಂಬ ಗಂಭೀರ ಅಕಾಡೆಮಿಕ್ ವಿಷಯದ ಮೇಲೆ ಸಂಶೋಧನೆ ನಡೆಸಿ ಪಿಎಚ್ಡಿ ಪದವಿಗೆ ಅರ್ಹತೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇವರ ಸಂಶೋಧನೆಗೆ ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣಶಾಸ್ತ್ರ ತಜ್ಞ ಪ್ರೊ. ಜಗನ್ನಾಥ್ ಕೆ ಡಾಂಗೆ ಅವರು ಮಾರ್ಗದರ್ಶಕರಾಗಿದ್ದರು.

WhatsApp Image 2025 11 07 at 11.28.38 AM

ಇದನ್ನೂ ಓದಿ: ಶಿವಮೊಗ್ಗ | ನ. 8, 9ರಂದು ʼಸಮೃದ್ಧಿ 2025ʼ ಕಾರ್ಯಾಗಾರ

ʼವಿದ್ಯೆ ಎಂದರೆ ಸಂಪತ್ತು; ಬಡತನ ಎಂದರೆ ಅಡ್ಡಿ ಅಲ್ಲʼ ಎಂಬ ನಂಬಿಕೆಯನ್ನು ಬದುಕಿನ ಮೂಲಕ ಸಾಬೀತುಪಡಿಸಿದ ಸಂದೀಪ ಅವರ ಈ ಸಾಧನೆಗೆ, ಸ್ನಾತಕೋತ್ತರ ಶಿಕ್ಷಣಶಾಸ್ತ್ರ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರು, ಪ್ರಾಧ್ಯಾಪಕರು, ಸಿಬ್ಬಂದಿವರ್ಗ, ಕುಟುಂಬದವರು ಮತ್ತು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

ಗ್ರಾಮೀಣ ಪರಿಸರದಿಂದ ಬಂದು, ಅಷ್ಟೊಂದು ಸವಾಲುಗಳ ನಡುವೆಯೂ ಶೈಕ್ಷಣಿಕ ಶ್ರೇಷ್ಟತೆಯ ಶಿಖರಕ್ಕೇರುತ್ತಿರುವ ಸಂದೀಪ ಅವರ ಕಥೆ ಇಂದಿನ ಯುವಜನತೆಗೆ ಪ್ರೇರಣಾದಾಯಕ ಮಾದರಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...