ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ ಇಟ್ಟಿದೆ ಎಂದು ಅಧ್ಯಕ್ಷ ಎಚ್ ಎಸ್ ಸುಂದರೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಸುಡಾ ವತಿಯಿಂದ ಅಪಾರ್ಟ್‌ಮೆಂಟ್ ನಿರ್ಮಾಣ ಯೋಜನೆ :
ಪ್ರಾಧಿಕಾರದ ಊರಗಡೂರಿನ ವಸತಿ ಬಡಾವಣೆಯಲ್ಲಿ 04 ಎಕರೆ ಪ್ರದೇಶದಲ್ಲಿ ಮತ್ತು ಸೋಮಿನಕೊಪ್ಪ ಸರ್ವೆ ನಂ. 122 & 126/1ರಲ್ಲಿ 01 ಎಕರೆ 09 ಗುಂಟೆ ಪ್ರದೇಶದಲ್ಲಿ ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಅತ್ಯಾಧುನಿಕ ಅಪಾರ್ಟ್‌ಮೆಂಟ್‌ಗಳನ್ನು ರೂ. ಸೌಲಭ್ಯಗಳನ್ನೊಳಗೊಂಡ 10000.00 ಲಕ್ಷಗಳ ಅಂದಾಜುಮೊತ್ತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.ಪ್ರಾಧಿಕಾರಕ್ಕೆ ಅಟಲ್ ಬಿಹಾರಿ ವಾಜಪೇಯಿ (ಮಲ್ಲಿಗೇನಹಳ್ಳಿ) ವಸತಿ ಬಡಾವಣೆಯಲ್ಲಿ ಹೊಸ ಕಛೇರಿ ಕಟ್ಟಡವನ್ನು ರೂ. 1000.00 ಲಕ್ಷಗಳ ಅಂದಾಜುಮೊತ್ತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ಶಿವಮೊಗ್ಗ-ಭದ್ರಾವತಿ 03-11 (2041) ರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಹಾಯೋಜನೆ ಕಾರ್ಯ ಪ್ರಗತಿಯಲ್ಲಿದ್ದು, ಹಾಲಿ ಭೂ ಉಪಯೋಗ ನಕ್ಷೆಗಳನ್ನು ತಯಾರಿಸಿ ಪ್ರಾಧಿಕಾರದಿಂದ ಅನುಮೋದಿಸಲಾಗಿದೆ. ಪ್ರಸ್ತಾವಿತ ಭೂ ಉಪಯೋಗ ನ ರಸ್ತೆ ಪರಿಚಲನ ನಕ್ಷೆಗಳನ್ನು ಸಿದ್ಧಪಡಿಸಿ ತಾತ್ಕಾಲಿಕ ಅನುಮೋದನೆ ಪಡೆಯಲು ಸರ್ಕಾರಕ್ಕೆ ಸಲ್ಲಿಸಲು ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ ಎಂದರು.
ಸ್ವಾಮಿ ವಿವೇಕಾನಂದ ಬಡಾವಣೆಯ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿ ಮಾಲ್ ನಿರ್ಮಾಣ;
ಸ್ವಾಮಿ ವಿವೇಕಾನಂದ ಬಡಾವಣೆಯ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿ ರೂ. 1000.00 ಲಕ್ಷಗಳ ಅಂದಾಜು ಮೊತ್ತದಲ್ಲಿ ಮಾಲ್ ನಿರ್ಮಿಸಲು ಉದ್ದೇಶಿಸಲಾಗಿದೆ. ಜೆ.ಹೆಚ್ ಪಟೇಲ್ ಬಡಾವಣೆಯ ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿ ರೂ. 1000.00 ಲಕ್ಷಗಳ ಅಂದಾಜು ಮೊತ್ತದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಶಿವಮೊಗ್ಗ ನಗರದ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ 4 ಕಿರಿಗME UP ಲಕ್ಷಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ .22 ಕೆರೆಗಳನ್ನು 8835000.00 ಮತ್ತು ಭದ್ರಾವತಿ ನಗರದಲ್ಲಿ ಅಭಿವೃದ್ಧಿಪಡಿಸಲು ಡಿ.ಪಿ.ಆರ್. ತಯಾರಿಸಲಾಗುತ್ತಿದೆ. ವಾಜಪೇಯಿ ಬಡಾವಣೆಯಲ್ಲಿ 60 ಮೀ. ಅಗಲ ಹೊರವರ್ತುಲ ರಸ್ತೆಯನ್ನು ರೂ.500.00 ಲಕ್ಷಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಹಾಗೂ ಜೆ.ಹೆಚ್.ಪಟೇಲ್ ಬಡಾವಣೆ ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಮತ್ತು ನಿಧಿಗೆ-ಮಾಚೇನಹಳ್ಳಿ ಬಡಾವಣೆಯಲ್ಲಿ ಒಟ್ಟು 3 ಉದ್ಯಾನವನಗಳ ಅಭಿವೃದ್ಧಿಪಡಿಸಲು ಒಟ್ಟು ರೂ. 295.00 ಲಕ್ಷಗಳ ಅಂದಾಜು ಮೊತ್ತದಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದರು.
ಗೊಪಶೆಟ್ಟಿಕೊಪ್ಪ ಗ್ರಾಮದ ವಿವಿಧ ಸ.ನಂ. ಗಳ ಒಟ್ಟು ವಿಸ್ತೀರ್ಣ 104 ಎಕರೆ 39 ಗುಂಟೆ ಪ್ರದೇಶದಲ್ಲಿ ಶೇ.50:50 ರ ಅನುಪಾತದಲ್ಲಿ ಒಪ್ಪಿಗೆ ಸೂಚಿಸಿರುವ 30 ಎಕರೆ 10 ಗುಂಟೆ ಜಮೀನನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಪೂರ್ವಾನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಧ್ಯಕ್ಷ ಸುಂದರೇಶ್ ತಿಳಿಸಿದರು.