ಶಿವಮೊಗ್ಗ | ಸೆ.4ಕ್ಕೆ ಸೌಹಾರ್ದವೇ ಹಬ್ಬ : ಗೋಪಿವೃತ್ತದಲ್ಲಿ ಮಾನವ ಸರಪಳಿ

Date:

ಶಿವಮೊಗ್ಗ, ಈ ವಾರಾಂತ್ಯದಲ್ಲಿ ನಡೆಯಲಿರುವ ಗಣಪತಿ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯಲ್ಲಿ ಶಾಂತಿ ಕಾಪಾಡಲು ಮತ್ತು ಎಲ್ಲಾ ಧರ್ಮದವರು ಒಟ್ಟಾಗಿ ಸಾಮರಸ್ಯದಿಂದ ಹಬ್ಬ ಆಚರಿಸುವ ದೃಷ್ಠಿಯಿಂದ ‘ನಮ್ಮ ನಡೆ ಶಾಂತಿಯ ಕಡೆ’ ಸಮಿತಿಯು ಸೆ.೪ ರಂದು ಮಧ್ಯಾಹ್ನ ೪ ಗಂಟೆಗೆ ಅಂಬೇಡ್ಕರ್ ಭವನದಲ್ಲಿ ಸೌಹಾರ್ದವೇ ಹಬ್ಬ ಶಾಂತಿಸಭೆಯನ್ನು ಹಮ್ಮಿಕೊಂಡಿದೆ.
ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾರ್ಯಕ್ರಮದ ಮುಖಂಡ ವಕೀಲ ಕೆ.ಪಿ. ಶ್ರೀಪಾಲ್ ಹೇಳಿದರು.

- Advertisement -

4 ವರ್ಷಗಳಿಂದ ನಮ್ಮ ಸಮಿತಿಯು ಶಿವಮೊಗ್ಗದಲ್ಲಿ ಶಾಂತಿ ನೆಲೆಸುವ ಹಿನ್ನೆಲೆಯಲ್ಲಿ ಪ್ರಮುಖವಾಗಿ ಎಲ್ಲಾ ಧರ್ಮದವರ ಹಬ್ಬಗಳನ್ನು ಸಾಮರಸ್ಯದಿಂದ ಒಟ್ಟಾಗಿ ಆಚರಿಸಲು ಅನುಕೂಲವಾಗುವಂತೆ ಶಾಂತಿ ನಡಿಗೆ, ಸೌಹಾರ್ದ ಹಬ್ಬ ಎಂಬ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಈ ಬಾರಿಯೂ ಕೂಡ ಶಾಂತಿ ಕಾರ್ಯಕ್ರಮಗಳನ್ನು ಕೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸೆ.4 ರಂದು ಮಧ್ಯಾಹ್ನ 4 ಗಂಟೆಗೆ ಗೋಪಿವೃತ್ತದಲ್ಲಿ ಮಾನವ ಸರಪಳಿಯನ್ನು ರಚಿಸಲಾಗುವುದು. ಎಲ್ಲಾ ಧರ್ಮದ ಗುರುಗಳು ಇದರಲ್ಲಿ ಭಾಗವಹಿಸುತ್ತಾರೆ. ನಂತರ ಅಂಬೇಡ್ಕರ್ ಭವನದಲ್ಲಿ ಶಾಂತಿಸಭೆ ನಡೆಯಲಿದೆ. ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರರು, ಬಸವಕೇಂದ್ರ ಬಸವಮರುಳಸಿದ್ಧರು, ಫಾದರ್ ಸ್ಟಾನ್ಲಿ ಡಿಸೋಜಾ, ಜಾಮೀಯಾ ಮಸೀದಿಯ ಗುರು ಅಬ್ದುಲ್ ಹಬೀಬ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ , ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಸೇರಿದಂತೆ ಎಲ್ಲಾ ಧರ್ಮದ ಸ್ವಾಮೀಜಿ, ಫಾದರ್, ಮೌಲಿಗಳು ಇದರಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

ಕಾರ್ಯಕ್ರಮದ ಬಳಿಕ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದೆ. ಗಾಯಕ ಕೆ. ಯುವರಾಜ್, ಇಮ್ತಿಯಾಜ್ ಸುಲ್ತಾನ್ ಅವರಿಂದ ಗಾಯನ, ರಂಗಬೆಳಕು ತಂಡದಿಂದ ಹಾಡು, ರಂಗಗೀತೆ ಏರ್ಪಡಿಸಲಾಗಿದೆ ಎಂದರು.

ಡಿ ಎಸ್ ಎಸ್ ರಾಜ್ಯ ಸಂಚಾಲಕ ಮುಖಂಡ ಎಂ. ಗುರುಮೂರ್ತಿ ಮಾತನಾಡಿ. ಶಿವಮೊಗ್ಗ ಅತ್ಯಂತ ಸೂಕ್ತ ಪ್ರದೇಶವಾಗಿತ್ತು. ಎಲ್ಲಾ ಸೌಲಭ್ಯಗಳಿದ್ದರೂ ಇಲ್ಲಿ ಹಿಂದು- ಮುಸ್ಲೀಂ ಗಲಾಟೆಗಳು ನಡೆಯುತ್ತವೆ ಎಂಬ ಕಾರಣಕ್ಕೆ ಬಂಡವಾಳ ಹೂಡುವವರು ಬರುತ್ತಿಲ್ಲ. ನಮ್ಮ ನಡೆ ಶಾಂತಿಯ ಕಡೆಗೆ ಎಂಬ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದರಿಂದ ಒಂದಿಷ್ಟು ಶಾಂತಿ ನೆಲೆಸಿದೆ. ಗಣೇಶ್-ಈದ್ ಮಿಲಾದ್ ಹಬ್ಬಗಳು ಶಾಂತಿಯುತವಾಗಿ ನಡೆಯಲಿ ಎಂದರು.

ಮುಖಂಡರಾದ ಕಿರಣ್ ಕುಮಾರ್, ಅಫ್ತಾಬ್ ಪರ್ವೇಜ್, ಅಬ್ದುಲ್ ವಹಾಬ್, ಜಗದೀಶ, ಮಹಮ್ಮದ್ ಹುಸೇನ್, ಪಾಲಾಕ್ಷಿ, ನಾಗರಾಜ್ ಕಂಕಾರಿ, ಹರಿಗೆ ರವಿ, ಹುಸೇ ನ್ , ರೈತ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಚಂದ್ರಪ್ಪ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...