ಶಿವಮೊಗ್ಗ | ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ : ನಟ ಅನಿರುದ್ಧ್ ವಿರೋಧ

Date:

ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿಯೊಂದಿಗೆ, ಸುಮಾರು 10 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ರಾಜ್ಯ ಸರ್ಕಾರವು ಕೈಗೆತ್ತಿಕೊಂಡಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಕುರಿತು ಪರ-ವಿರೋಧ ಚರ್ಚೆಗಳು ತೀವ್ರಗೊಂಡಿವೆ.

- Advertisement -

ಈ ಯೋಜನೆ ಜಾರಿ ವಿಚಾರದಲ್ಲಿ ಇದೀಗ ಚಿತ್ರನಟ ಅನಿರುದ್ಧ್ ಜಟ್ಕರ್ ಅವರು ಧ್ವನಿ ಎತ್ತಿದ್ದು, ಯೋಜನೆಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತಾಗಿ ವಿಡಿಯೋ ಸಂದೇಶದ ಮೂಲಕ ಮಾತನಾಡಿರುವ ನಟ ಅನಿರುದ್ಧ್, ಈ 2,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಯೋಜನೆಯಿಂದಾಗಿ ಅಪಾರ ಪ್ರಮಾಣದ ವನ್ಯ ಸಂಕುಲ ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸುಮಾರು 10,500 ಕೋಟಿ ರೂಪಾಯಿಗಳ ಬೃಹತ್ ಯೋಜನೆಯ ಇದಾಗಿದ್ದು, ಯೋಜನೆಯ ಅನುಷ್ಠಾನದಿಂದಾಗಿ ಸ್ಥಳೀಯವಾಗಿರುವ ಅನೇಕ ಜನರ ಸ್ಥಳಾಂತರಕ್ಕೂ ಮುಂದಾಗಲಾಗಿದೆ.

ಈ ಯೋಜನೆಯಿಂದ ಇಡೀ ಪ್ರದೇಶದ ವನ್ಯಜೀವಿಗಳು ಸಂಪೂರ್ಣ ನಾಶವಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿರುವ ಅನಿರುದ್ಧ್ ಜಟ್ಕರ್ ಅವರು, ಕೂಡಲೇ ರಾಜ್ಯ ಸರ್ಕಾರವು ಈ ಯೋಜನೆ ಜಾರಿ ಕುರಿತು ಮರು ಚಿಂತನೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...