ಶಿವಮೊಗ್ಗ | ರಾಬರ್ಟ್ ವಾದ್ರಾರನ್ನು ಗುಂಡಿಕ್ಕಿ ಕೊಲ್ಲಿ: ಬಿಜೆಪಿ ಶಾಸಕ ಚನ್ನಬಸಪ್ಪ ಪ್ರಚೋದನಾಕಾರಿ ಹೇಳಿಕೆ

Date:

ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿಯವರ ಪತಿ ರಾಬರ್ಟ್ ವಾದ್ರಾ ವಿರುದ್ಧ ಪ್ರಚೋದನಾಕಾರಿಯಾಗಿ ಮಾತನಾಡಿರುವ ಚನ್ನಬಸಪ್ಪ, “ರಾಬರ್ಟ್‌ ವಾದ್ರಾ ಅವರು ಭಯೋತ್ಪಾದಕರಿಗೆ ಶಕ್ತಿ ತುಂಬುವ ಹೇಳಿಕೆ ನೀಡಿದ್ದಾರೆ. ಅವರನ್ನು ಬಂಧಿಸಬೇಕು ಅಥವಾ ಗುಂಡಿಕ್ಕಿ ಕೊಲ್ಲಬೇಕು” ಎಂದು ಹೇಳಿದ್ದಾರೆ.

- Advertisement -

ಪಹಲ್ಗಾಮ್ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದ ರಾಬರ್ಟ್‌ ವಾದ್ರಾ, ಹಿಂದುಗಳು ಎಲ್ಲ ಮುಸ್ಲಿಮರಿಗೆ ತೊಂದರೆ ಕೊಡುತ್ತಿದ್ದಾರೆ. ಮುಸ್ಲಿಮರು ದುರ್ಬಲರಾಗ್ತಿದ್ದಾರೆ ಅಂತ ಉಗ್ರರಿಗೆ ಅನ್ನಿಸಿದೆ. ಪಹಲ್ಗಾಮ್ ದಾಳಿಗೆ ಹಿಂದುತ್ವವೇ ಕಾರಣ ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಾದ್ರಾ ಹೇಳಿಕೆ ವಿರುದ್ಧ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚನ್ನಬಸಪ್ಪ, “ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮಡಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಇಂತಹ ಸಮಯದಲ್ಲಿ ವಾದ್ರಾ ನೀಡಿರುವ ಹೇಳಿಕೆಯನ್ನು ಸಹಿಸಲಾಗದು. ಉಗ್ರವಾದಿಗಳಿಗೆ ಶಕ್ತಿ ತುಂಬುವ ರೀತಿಯಲ್ಲಿ ಮಾತನಾಡಿರುವ ವಾದ್ರಾ ಒಬ್ಬ ದೇಶದ್ರೋಹಿ. ಅವರು ಭೂಮಿ ಮೇಲಿರಲು ನಾಲಾಯಕ್ಕು” ಎಂದಿದ್ದಾರೆ.

“ಪಾಕಿಸ್ತಾನಕ್ಕೆ ಬಾಂಬ್ ಹಾಕಿ, ಭಾರತ ಮಾತೆಗೆ ಹೂವು ಹಾಕಿ ಎಂಬುದು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಬಾರದು. ಇದು ಕಾರ್ಯಾಗತ ಆಗಬೇಕು. ಆದ್ದರಿಂದ ಮೊದಲಿಗೆ ವಾದ್ರಾ ಅವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಹೇಳುತ್ತಿದ್ದೇನೆ” ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮೋಹನ್ ರೆಡ್ಡಿ, ಜ್ಞಾನೇಶ್ವರ್, ಕೆ.ಎನ್.ಜಗದೀಶ್, ಎನ್.ಜೆ.ನಾಗರಾಜ್, ಮಂಜುನಾಥ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...