ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ಅಮಾನವೀಯವಾಗಿದ್ದು.
ಈ ದಾಳಿಯನ್ನು “ನಾವು ತೀವ್ರವಾಗಿ ಖಂಡಿಸುತ್ತೇವೆ”. ನಾಗರಿಕ ಸಮಾಜ ಇಂತಹ ಕೃತ್ಯಗಳನ್ನು ಖಂಡಿಸಬೇಕು ವಿದೇಶಿ ಪ್ರವಾಸಿಗರು ಸೇರಿ ನಿರಪರಾಧಿ ಜನರು ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ. ಇಂತಹ ಅಮಾನುಷ ಕೃತ್ಯಗಳೆಸಗಿದ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಲಿ ಎಂದು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಆಗ್ರಹಿಸಿದೆ.
ಕೇಂದ್ರ ಗೃಹ ಸಚಿವಾಲಯ ಈ ದುರ್ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಿ ಮತ್ತೊಮ್ಮೆ ಕಾಶ್ಮೀರ ಪ್ರವಾಸೋದ್ಯಮ ಸುಸೂತ್ರವಾಗಿ ನಡೆಯುವಂತಾಗಲಿ ಎಂದು ಸಾಲಿಡಾರಿಟಿ ಯೂತ್’ಮೂವ್ಮೆಂಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.