ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಅ.7 ಬೆಳಿಗ್ಗೆ 10.30ಕ್ಕೆ ವಿದ್ಯಾನಗರದ ಶ್ರೀ ಮಹರ್ಷಿ ಜಿಲ್ಲಾ ವಾಲ್ಮೀಕಿ ಭವನದಲ್ಲಿ 2025-26 ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಉದ್ಘಾಟನೆ ನೆರವೇರಿಸುವರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಆಧ್ಯಕ್ಷರಾದ ಬಿ.ಕೆ.ಸಂಗಮೇಶ್, ಸಾಗರ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಆಗಮಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಹಾಗೂ ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರ ಅಧ್ಯಕ್ಷರುಗಳು, ಜಿಲ್ಲಾಧಿಕಾರಿ, ಜಿ.ಪಂ ಸಿಇಓ, ಪೊಲೀಸ್ ಅಧೀಕ್ಷಕರು, ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಕನ್ನಡ ಭಾರತಿ ನಿರ್ದೇಶಕರಾದ ಪ್ರೊ.ನೆಲ್ಲಿಕಟ್ಟೆ ಎಸ್.ಸಿದ್ದೇಶ್ ವಿಶೇಷ ಉಪನ್ಯಾಸ ನೀಡುವರು.