ಶಿವಮೊಗ್ಗ | ಎಸ್ಸೆಸೆಲ್ಸಿ ಪರೀಕ್ಷೆ- 2 ಫಲಿತಾಂಶ ಸಂಜನಾಳಿಗೆ 625 ಅಂಕ

Date:

ಶಿವಮೊಗ್ಗ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶವು ಶುಕ್ರವಾರದಂದು ಪ್ರಕಟವಾಗಿದ್ದು, ಹಿಂದಿನ ಫಲಿತಾಂಶದ ವೇಳೆ ಕೇವಲ ಒಂದು ಅಂಕದಿಂದ ಎಸೆಸೆಲ್ಸಿಯಲ್ಲಿ ಗರಿಷ್ಠ ಅಂಕಗಳಿಸುವ ಅವಕಾಶ ತಪ್ಪ್ಪಿಸಿಕೊಂಡಿದ್ದ ವಿದ್ಯಾರ್ಥಿನಿ, ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625ಕ್ಕೆ ಗಳಿಸಿ ಸಾಧನೆ ಮಾಡಿದ್ದಾರೆ.

- Advertisement -

ಈ ಹಿಂದಿನ ಫಲಿತಾಂಶದ ವೇಳೆ ಶಿವಮೊಗ್ಗದ ಆದಿಚುಂಚನಗಿರಿ ಪ್ರೌಢ ಶಾಲೆಯ ಸಂಜನಾ.ಎಸ್ 624ಅಂಕ ಪಡೆದಿದ್ದರು. ವಿಜ್ಞಾನ ವಿಷಯದಲ್ಲಿ ಒಂದು ಅಂಕ ಕಡಿತವಾಗಿತ್ತು. ಒಂದು ಅಂಕದಿಂದ ರಾಜ್ಯಕ್ಕೆ ಟಾಪರ್ ಆಗುವ ಅವಕಾಶದಿಂದ ವಂಚಿತರಾಗಿದ್ದ ಸಂಜನಾ ಮತ್ತೆ ವಿಜ್ಞಾನ ವಿಷಯ ಪರೀಕ್ಷೆ ಬರೆದು 80ಕ್ಕೆ 80 ಅಂಕ ಪಡೆದಿದ್ದಾರೆ. ಈ ಮೂಲಕ 625ಕ್ಕೆ 625ಕ್ಕೆ ಅಂಕ ಪಡೆದ ಸಾಧನೆ ಮಾಡಿದ್ದಾರೆ. ಸಂಜನಾ ತಂದೆ ಸುರೇಶ್.ಎಂ ಪೊಲೀಸ್ ಇಲಾಖೆಯಲ್ಲಿ ಎಸ್‌ಎಸ್‌ಐ ಆಗಿ ಕೆಲಸ ಮಾಡುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...