ಶಿವಮೊಗ್ಗ | ಬೆಂಗಳೂರು ಜನಿವಾರ ತೆಗೆಸಿದ್ದರೆ ಕಠಿಣ ಕ್ರಮ; ಡಾ.ಎಂ.ಸಿ.ಸುಧಾಕರ್, ಅಧಿಕಾರಿಯನ್ನು ಅಮಾನತು ಮಾಡಿ; ಮಧು ಬಂಗಾರಪ್ಪ ಸೂಚನೆ

Date:

ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಕಾರಣಕರ್ತ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ಶಿವಮೊಗ್ಗ ನಗರದ ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ನಿರ್ದೇಶನ ಕೊಡುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ. ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಈ ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಂಬಂಧಪಟ್ಟ ಇಲಾಖೆ ಜತೆ ಚರ್ಚಿಸುವೆ.

ಈ ಘಟನೆ ನನ್ನ ಜಿಲ್ಲೆಯಲ್ಲಿ ಆಗಿರುವುದರಿಂದ ಕ್ರಮಕ್ಕೆ ಸೂಚನೆ ನೀಡುತ್ತೇವೆ. ವಿದ್ಯಾರ್ಥಿಗಳ ವಿಚಾರದಲ್ಲಿ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಜನಿವಾರ ತೆಗೆಸಿದ್ದು ಅದು ಅತಿರೇಕದ ವರ್ತನೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ.ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ.ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ಸುಧಾಕ‌ರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...