ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಪ್ರಮುಖ ರಸ್ತೆ, ಸರ್ಕಲ್ ಮತ್ತು ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ಮಾಡಲಾಗಿದೆ.

ನೆಹರು ಕ್ರೀಡಾಂಗಣ ಮುಂದಿನ ಸವಳಂಗ ರಸ್ತೆ, ಗೋಪಿ ವೃತ್ತ, ಅಮೀರ್ ಅಹಮದ್ ಸರ್ಕಲ್, ಶಿವಪ್ಪನಾಯಕ ಪ್ರತಿಮೆ, ಜೈಲ್ ವೃತ್ತ ಸೇರಿದಂತೆ ಪ್ರಮುಖ ವೃತ್ತ ಮತ್ತು ರಸ್ತೆಗಳು ಬಣ್ಣ ಬಣ್ಣದ ದೀಪಗಳಿಂದ ಕಂಗೊಳಿಸುತ್ತಿವೆ.

ಜಿಲ್ಲಾಧಿಕಾರಿ ಕಚೇರಿ, ನೆಹರು ಕ್ರೀಡಾಂಗಣ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕುವೆಂಪು ರಂಗಮಂದಿರ ಸೇರಿದಂತೆ ವಿವಿಧ ಸರ್ಕಾರಿ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.