ಶಿವಮೊಗ್ಗ | ಭದ್ರಾವತಿ ಅರೆದೊಟ್ಲು ಗ್ರಾಮದಲ್ಲಿ ಕಳ್ಳತನ ; ಆರೋಪಿ ಬಂಧನ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆದೊಟ್ಲು ಗ್ರಾಮದಲ್ಲಿ ಜೂನ್ 16, 2025 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಸುಮಾರು 6.43 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

ಅರದೊಟ್ಲು ಗ್ರಾಮದ ಮಹಿಳೆಯೊಬ್ಬರು ತಮ್ಮ ಮನೆಯಿಂದ ಚಿನ್ನಾಭರಣ, ಬೆಳ್ಳಿ ಆಭರಣ ಮತ್ತು ನಗದು ಕಳ್ಳತನವಾಗಿರುವ ಬಗ್ಗೆ ಜೂನ್ 16ರಂದು ಹೊಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಕಲಂ 331(3), 331(4), 305 ಬಿಎನ್‌ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಪ್ರಕರಣದ ತನಿಖೆ ಮತ್ತು ಆರೋಪಿಗಳ ಪತ್ತೆಗಾಗಿ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ ಜಿ.ಕೆ, ಹೊಳೆಹೊನ್ನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಲಕ್ಷ್ಮಿಪತಿ ಆರ್.ಎಲ್. ಅವರ ನೇತೃತ್ವದಲ್ಲಿ ಎಎಸ್‌ಐ ಉಮೇಶ್ ಹಾಗೂ ಸಿಬ್ಬಂದಿಗಳಾದ ಹೆಚ್‌ಸಿ ಅಣ್ಣಪ್ಪ, ಪ್ರಸನ್ನ, ಮಂಜುನಾಥ, ಪ್ರಕಾಶ್ ನಾಯ್ಕ್, ಕುಮಾರ್ ಮತ್ತು ಪಿಸಿ ವಿಶ್ವನಾಥ್ ಅವರನ್ನು ಒಳಗೊಂಡ ತಂಡವನ್ನು ನೇಮಿಸಿದ್ದರು.

6.43 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಪಡಿಸಿಕೊಂಡ ತನಿಖಾ ತಂಡವು ಜೂನ್ 19, 2025 ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಟೌನ್ ನಿವಾಸಿ , ಪ್ರಸ್ತುತ ಭದ್ರಾವತಿ ತಿಪ್ಪಲಾಪುರ ಕ್ಯಾಂಪ್ ಅರಳಹಳ್ಳಿ ಗ್ರಾಮದ ಅಪ್ರೋಜ್ ಅಹಮದ್ (42) ಎಂಬಾತನನ್ನು ದಸ್ತಗಿರಿ ಮಾಡಿದೆ. ಆರೋಪಿಯಿಂದ ಹೊಳೆಹೊನ್ನೂರು ಪೊಲೀಸ್ ಠಾಣೆಯ ಎರಡು ಕೇಸ್​ಗೆ ಸಂಬಂಧಿಸಿದಂತೆ ಒಟ್ಟು 66 ಗ್ರಾಂ 820 ಮಿಲಿ ಗ್ರಾಂ ತೂಕದ ಬಂಗಾರದ ಆಭರಣ, 113 ಗ್ರಾಂ ಬೆಳ್ಳಿ ಆಭರಣ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಬೈಕ್ ಸೇರಿ ಒಟ್ಟು ಅಂದಾಜು 6,43,000/- ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಕ್ರಮ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಗಳ ಮೇಲೆ ತಹಶೀಲ್ದಾರ್ ದಾಳಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​​ ಪೇಟೆ, ಆನಂದಪುರ ಮಾರ್ಗವಾಗಿ ಅಕ್ರಮವಾಗಿ...

ಶಿವಮೊಗ್ಗ | ತಂದೆ-ತಾಯಿ ಬದುಕಿರುವಾಗಲೇ ಗೌರವಿಸಿ, ಪ್ರೀತಿಸಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು....

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...