ಶಿವಮೊಗ್ಗ | ಖಾಸಗಿ ಫೋಟೋ ವೈರಲ್‌ ಮಾಡುವುದಾಗಿ ಬೆದರಿಸಿ 10 ಲಕ್ಷಕ್ಕೆ ಬೇಡಿಕೆ; ದೂರು ದಾಖಲು

Date:

ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ವರದಿಯಾಗಿದೆ. ಈ ಕುರಿತು ಸಂತ್ರಸ್ತ ಮಹಿಳೆಯು ಶಿವಮೊಗ್ಗದ ಸಿಇಎನ್ (CEN) ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ಅಕ್ಟೋಬರ್ 31 ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಫೋನ್ ನಂಬರ್‌ಗೆ ಅವರ ಖಾಸಗಿ ವಿಡಿಯೋಗಳು ಮತ್ತು ಫೋಟೋಗಳನ್ನು ಕಳುಹಿಸಿ, ತನಗೆ 10 ಲಕ್ಷ ಹಣ ನೀಡದಿದ್ದರೆ, ಈ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅವರ ಗಂಡ ಹಾಗೂ ಸಂಬಂಧಿಕರೊಂದಿಗೆ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಬೆದರಿಕೆಯಿಂದ ಭಯಗೊಂಡ ಮಹಿಳೆ ಅಂದು ಆ ಸಂದೇಶಗಳನ್ನು ಡಿಲೀಟ್​ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿ: ಶಿವಮೊಗ್ಗ | 6200 ಬಿಪಿಎಲ್ ಕಾರ್ಡ್ ರದ್ದುಗೊಳಿಸಿದ ಅಧಿಕಾರಿಗಳು

ಆದರೂ ಬಿಡದ ಆ ವ್ಯಕ್ತಿ ನ. 3ರಂದು ಪುನಃ ಮಹಿಳೆಗೆ ಕರೆ ಮಾಡಿ, ಹಣ ವರ್ಗಾಯಿಸಲು ವಿವಿಧ ಬ್ಯಾಂಕ್ ಖಾತೆಗಳ ವಿವರಗಳನ್ನು ಕಳುಹಿಸಿದ್ದು, ಹಣ ಹಾಕದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಮತ್ತೆ ಬೆದರಿಕೆ ಹಾಕಿದ್ದಾನೆ. ಇದರಿಂದ ಭಯಭೀತರಾದ ಮಹಿಳೆ, ಕೊನೆಗೆ ಶಿವಮೊಗ್ಗದ ಸಿಇಎನ್ (CEN) ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...