ಶಿವಮೊಗ್ಗ | ಪ್ರವಾಸಿಗರ ಬಸ್ ಪಲ್ಟಿ ; ಹಲವರಿಗೆ ಗಾಯ

Date:

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪ್ರವಾಸಿಗರ ಬಸ್ ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ಬಿದ್ದ ಪರಿಣಾಮ, ಸುಮಾರು 18 ಜನರು ಗಾಯಗೊಂಡ ಘಟನೆ ಸಾಗರದ ಕಾರ್ಗಲ್ ಬಳಿಯ ಆಡುಕಟ್ಟೆಯ ಜೋಗಿನ ಮಠದ ಬಳಿ ನಡೆದಿದೆ.

- Advertisement -

ರತ್ನಮ್ಮ (50), ಗಮ್ಯಶ್ರೀ (11), ಸುಶೀಲಾ (45), ನಾರಾಯಣಪ್ಪ (72), ಸುಮಿತ್ ಕುಮಾರ್ (38), ಸುಬ್ಬಲಕ್ಷ್ಮಿ(29), ರೋಹಿತ್ ( 20), ನವೀನ (12), ಸಾವಿತ್ರಿ (36), ವಿದ್ಯಾ ರಾಣಿ (34), ಜ್ಯೋತಿ (32), ಪುಷ್ಪಾವತಿ (48), ಲಕ್ಷ್ಮಿ (50), ಗಂಗಮ್ಮ (65), ಮದನ್ (14), ಗೌತಮ್ (30), ಶಕುಂತಲಾ (34) ಗಾಯಗೊಂಡವರೆಂದು ಗುರುತಿಸಲಾಗಿದೆ.ಗಾಯಾಳುಗಳನ್ನು ಸ್ಥಳೀಯರ ನೆರವಿನೊಂದಿಗೆ ಕಾರ್ಗಲ್ ಠಾಣೆ ಪೊಲೀಸರು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಘಟನೆ ನಡೆದ ಸ್ಥಳವು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ 45 ಜನರಿದ್ದ ಪ್ರವಾಸಿಗರ ತಂಡವು, ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ಆಗಮಿಸಿತ್ತು.

ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ, ವಡನಬೈಲ್ ನ ಬಳೆ ಪದ್ಮಾವತಿ ಅಮ್ಮನವರ ದೇವಾಲಯಕ್ಕೆ ತೆರಳುತ್ತಿದ್ದರು.ಈ ವೇಳೆ ಬಸ್ ಬ್ರೇಕ್ ಫೇಲ್ ಆಗಿ ಪಲ್ಟಿಯಾಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿ ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...