ಸಾಗರ ತಾಲೂಕಿಗೆ ಕೆಎಎಸ್ ಅಧಿಕಾರಿ ವಿರೇಶ್ ಕುಮಾರ್ ಅವರನ್ನು ಸಾಗರ ಉಪವಿಭಾಗಾಧಿಕಾರಿಯಾಗಿ ಬುಧವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ವಿರೇಶ್ ಕುಮಾರ್ ಅವರು ದಾವಣಗೆರೆ ಸ್ಮಾರ್ಟ್ ಸಿಟಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸಾಗರ ಉಪವಿಭಾಗಾಧಿಕಾರಿಯಾಗಿದ್ದ ಯತೀಶ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು.