ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಿನ್ನೆ ನಡೆದ ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವ ವಿಡಿಯೋ ವೈರಲ್ ಆಗಿದ್ದು ಈ ಘಟನೆ ಬಗ್ಗೆ ಹಿಂದೂ ಜಾಗರಣ ವೇದಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.
ನಿನ್ನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಿನ್ನೆ ಸಂಜೆ ಮೆರವಣಿಗೆ ನಡೆದಿದೆ.
ಈ ವೇಳೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಕುರಿತು ಹಿಂದೂ ಜಾಗರಣ ವೇದಿಕೆ ದೇಶ ದ್ರೋಹಿ ಘೋಷಣೆ ಕೂಗಲಾಗಿದೆ ಎಂದು ಆಗ್ರಹಿಸಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಮಿಥುನ್ ಕುಮಾರ್ ಭದ್ರಾವತಿ ಹಳೇ ನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಘಟನೆ ಕುರಿತು ದೂರು ದಾಖಲಾಗುತ್ತಿದೆ ವಿಡಿಯೋದಲ್ಲಿ ಭದ್ರಾವತಿಯಲ್ಲಿ ನಡೆದ ಘಟನೆ ಎಂದು ಹೇಳಲಾಗುತ್ತಿದ್ದು ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಪಾಕ್ ಪರ ಘೋಷಣೆ ಕೂಗಿದವರನ್ನ ಪರಿಶೀಲಿಸಲಾಗುತ್ತಿದ್ದು ಮುಂದಿನ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಈ ಪ್ರಕರಣ ಕುರಿತು ಮೂರು ತಂಡ ರಚಿಸಲಾಗಿದೆ. ಮೊದಲು ಎಫ್ಐಆರ್ ದಾಖಲಿಸಲಾಗುವುದು. ನಂತರ ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಲಾಗುತ್ತಿದೆ. ಈ ಘಟನೆಯನ್ನ ಪೊಲೀಸ್ ಇಲಾಖೆ ಭಾರಿ ಗಂಭೀರವಾಗಿ ಪರಿಗಣಿಸಿದೆ. ವಿಡಿಯೋವನ್ನ ಎಫ್ಎಸ್ಎಲ್ ಗೆ ಕಳುಹಿಸಲಾಗುವುದು ಎಂದರು.
ಭದ್ರಾವತಿ ಶಾಸಕರಾದ ಸಂಗಮೇಶ್ ಆಶಯ :
ಮುಸಲ್ಮಾನ್ ಜನಾಂಗದ ಪ್ರೀತಿಗೆ ಪಾತ್ರನಾಗಿರುವ ನನಗೆ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವ ಆಸೆ ಇದೆ ಎಂದು ಶಾಸಕ ಬಿಕೆ ಸಂಗಮೇಶ್ವರ ಹೇಳಿದ್ದಾರೆ. ಈ ವಿಡಿಯೋ ಸಹ ವೈರಲ್ ಆಗಿದೆ.
ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.ಅವರು ನಗರದ ಹೊಳೆಹನ್ನೂರು ಸರ್ಕಲ್ ಬಳಿ ಉಸ್ಮಾನಿಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಜೆ ಬಿ ಟಿ ಬಾಬು ನೇತೃತ್ವದಲ್ಲಿ ಹಬ್ಬದ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ರಕ್ತದಾನ ಉಚಿತ ಆರೋಗ್ಯ ಸುಖದಲ್ಲಿ ಭಾಗಿಯಾಗಿ ಮಾತನಾಡಿದರು,
ನಗರದಲ್ಲಿ ರದ್ದಾಗಿದ್ದ ಈದ್ ಮಿಲಾದ್ ಮೆರವಣಿಗೆಯನ್ನು ಕಳೆದ 20 ವರ್ಷಗಳ ಹಿಂದೆ ಮುಖ್ಯಮಂತ್ರಿ ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪುನರಾರಂಭಗೊಂಡಿತು.
ಶಾಂತ ರೀತಿಯಲ್ಲಿ ಮೆರವಣಿಗೆ ಮಾಡುತ್ತಾ ನಮ್ಮ ಗೌರವ ಉಳಿಸಿರುವ ನಿಮ್ಮೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಈದ್ ಮಿಲಾದ್ ಹಬ್ಬವನ್ನು ಸರ್ವರೂ ಶಾಂತಿಯಿಂದ ಆಚರಿಸಿದರೇ ಅಲ್ಲಾಹೂ ಎಲ್ಲರಿಗೂ ಒಳಿತು ಮಾಡುತ್ತಾರೆ ಎಲ್ಲರೂ ಸಹೋದರ ಭಾವನೆಯಿಂದ ಬದುಕು ನಡೆಸೋಣ ಎಂದರು.
ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅವರ ಹೇಳಿಕೆ ಬೆನ್ನಲ್ಲೇ ಪಾಕಿಸ್ಥಾನ ಪರ ಘೋಷಣೆಗಳು ಪುಷ್ಟಿ ನೀಡಿದೆ.