ಶಿವಮೊಗ್ಗ | ಈದ್ಗಾ ಮೈದಾನದ ತುರ್ತು ಎಸ್ ಪಿ ಸಭೆಗೆ ಗೈರು ಹಿನ್ನಲೆ ವಿನೋಬನಗರ ಪಿ ಐ ಅಮಾನತು

Date:

ಶಿವಮೊಗ್ಗ ವಿನೋಬ ನಗರದ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಅವರನ್ನ ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.

- Advertisement -

ಕರ್ತವ್ಯದಲ್ಲಿ‌ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ‌ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ಈದ್ಗಾ ಮೈದಾನದ ಮಾಲೀಕತ್ವ ವಿವಾದ ಸಂಬಂಧ ಎಸ್ಪಿಯವರು ಕರೆದಿದ್ದ ಸಭೆಗೆ ಚಂದ್ರಕಲಾ ಅವರು ಗೈರು ಆಗಿರುವ ಆರೋಪವೂ ಕೇಳಿ ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿ ಎಸ್ ಐ ಸಭೆಯನ್ನ ಎಸ್ಪಿ ಅವರು ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು‌. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು ಮೇಡಂಗೆ ಡಿಎಸ್ಬಿ ಬ್ರಾಂಚ್ ಗೆ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದೇ ವೇಳೆ ಸೂಕ್ತ ಶಿಸ್ತು ಕ್ರಮಕ್ಕೂ ಸಹ ಐಜಿಪಿಗೆ ಶಿಫಾರಸು ಮಾಡಿದ್ದರು ಎಂದು ತಿಳಿದು ಬಂದಿದೆ. ಎಸ್ಪಿ ಶಿಫಾರಸಿನ ಹಿನ್ನೆಲೆಯಲ್ಲಿ ಚಂದ್ರಕಲಾರನ್ನು ಸೇವೆಯಿಂದ ಅಮಾನತುಗೊಳಿಸಿ ಐಜಿಪಿ‌ ಆದೇಶಿಸಿರುವುದಾಗಿ ತಿಳಿದು ಬಂದಿದೆ. ಈ ಮೊದಲು ಹಲವು ವಿಷಯದಲ್ಲಿ ಸಾಕಷ್ಟು ಚರ್ಚೆಗೆ ಚಂದ್ರಕಲಾರ ನಡವಳಿಕೆ ಎಡೆಮಾಡಿಕೊಟ್ಟಿತ್ತು.

1001436065

ಇದಲ್ಲದೆ ಮೂರು ದಿನಗಳ ಹಿಂದೆ ಪೊಲೀಸ್ ಇನ್ಸ್ ಪೆಕ್ಟ‌ರ್ ಚಂದ್ರಕಲಾ ರವರ ಅಧಿಕಾರವಿದ್ದ ವಿನೋಬನಗರ ಪೊಲೀಸ್‌ ಠಾಣೆಗೆ ಅಡಿಷನಲ್ ಎಸ್ ಪಿ ಅನಿಲ್ ಕುಮಾ‌ರ್ ಭೂಮರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದರು.

ಇಲಾಖಾ ತನಿಖೆಯ ವೇಳೆ ಪಿ ಐ ಚಂದ್ರಕಲಾ ಸೂಕ್ತ ರೀತಿಯಲ್ಲಿ ಸ್ಪಂದಿಸಲಿಲ್ಲ ಎಂಬುದು ಆರೋಪವಾಗಿದೆ. ಕೇಸ್ ಫೈಲ್ ಗಳ ಮೈಂಟೆನೆನ್ಸ್, ದಾಖಲೆಗಳ ಮೈಂಟೆನೆನ್ಸ್ ಗಳಲ್ಲಿ ಆಸಕ್ತಿ ತೋರದೇ ನಿರ್ಲಕ್ಷ್ಯ ವಹಿಸುತ್ತಿದ್ದರು ಎನ್ನಲಾಗಿದೆ. ಅಲ್ಲದೇ, ಹಿರಿಯ ಅಧಿಕಾರಿಗಳು ಬಂದಾಗ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿರಲಿಲ್ಲ ಎಂದು ಆರೋಪದಿಂದ ಸಸ್ಪೆಂಡ್ ಮಾಡಲಾಗಿದೆ ಎಂಬುದು ಇಲಾಖೆಯ ಮೂಲಗಳಾಗಿದೆ. ಒಂದು ತಿಂಗಳ ಮಟ್ಟಿಗೆ ಸಸ್ಪೆಂಡ್ ಆಗಿರುವ ಪಿ ಐ ಚಂದ್ರಕಲಾ ರವರನ್ನು ರೂಲ್ ನಂ. 7 ಪ್ರಕಾರ ತನಿಖೆಗೊಳಪಡಿಸಲಾಗಲಿದೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ವಿನೋಬನಗರ ಪ್ರಭಾರ ಪಿಐ ಆಗಿ ಜಯನಗರ ಪಿಐ ಸಿದ್ದೇಗೌಡರು ಕಾರ್ಯನಿರ್ವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ತಂದೆ-ತಾಯಿ ಬದುಕಿರುವಾಗಲೇ ಗೌರವಿಸಿ, ಪ್ರೀತಿಸಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು....

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...