ಶಿವಮೊಗ್ಗ | ಸಿಗಂದೂರು ಸೇತುವೆಗೆ ಚೌಡೇಶ್ವರಿ ಹೆಸರಿಡದಿದ್ದರೆ ಉಗ್ರ ಹೋರಾಟ : ಪ್ರವೀಣ್ ಹಿರೆ ಇಡಗೋಡು ಎಚ್ಚರಿಕೆ

Date:

Advertisements

ಶಿವಮೊಗ್ಗ, ಸಾಗರ ತಾಲೂಕು ಅಂಬಾರಗೊಡ್ಲು ಬಳಿ ನಿರ್ಮಿಸಲಾಗಿರುವ ಸೇತುವೆಗೆ ಸಿಗಂಧೂರು ಚೌಡೇಶ್ವರಿ ಸೇತುವೆ ಎಂದು ಹೆಸರಿಡದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ನಾರಾಯಣಗುರು ವಿಚಾರ ವೇದಿಕೆಯ (ಎಸ್‌ಎನ್‌ಜಿವಿ) ಜಿಲ್ಲಾಧ್ಯಕ್ಷ ಪ್ರವೀಣ್ ಹಿರೆ ಇಡಗೋಡು ಎಚ್ಚರಿಸಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಚೌಡೇಶ್ವರಿ ದೇವಸ್ಥಾನದಿಂದಾಗಿ ಆ ಭಾಗ ಹೆಚ್ಚು ಪ್ರಸಿದ್ಧಿಗೆ ಬಂದಿದೆ. ಅದೊಂದು ಧರ್ಮಿಕ ಸ್ಥಳವಾಗಿ, ಪ್ರವಾಸಿ ತಾಣವಾಗಿಯೂ ಹೊರಹೊಮ್ಮಿದೆ.

ಬೇರೆ ಹೆಸರಿಡುವುದಕ್ಕಿಂತ ಸಿಗಂದೂರು ಚೌಡೇಶ್ವರಿಯ ಹೆಸರಿಡಬೇಕು ಎಂದ ಅವರು, ಶಿಷ್ಟಾಚಾರ ಏನೇ ಇರಬಹುದು. ಧರ್ಮದರ್ಶಿ ರಾಮಪ್ಪನವರನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಬೇಕು ಎಂದು ಒತ್ತಾಯಿಸಿದರು.

Advertisements

ಬಂಟ್ವಾಳ ಬಳಿ ನಿರ್ಮಾಣವಾದ ಮೇಲುಸೇತುವೆಯನ್ನು ಪ್ರೋಟೊಕಾಲ್ ಉಲ್ಲಂಘಿಸಿ ಕಲ್ಲಡ್ಕ ಪ್ರಭಾಕರ ಭಟ್ಟರಿಂದಲೇ ಉದ್ಘಾಟಿಸಿ, ಶ್ರೀರಾಮ ಸೇತುವೆ ಎಂದು ನಾಮಕರಣ ಮಾಡಲಾಗಿದೆ. ಅದೇ ರೀತಿಯಲ್ಲಿ ಈ ಸೇತುವೆಗೂ ಚೌಡೇಶ್ವರಿ ಹೆಸರು ಇಡಬೇಕು. ಈಗಾಗಲೇ ಸಂಸದರು ಚೌಡೇಶ್ವರಿ ಹೆಸರು ಇಡುವಂತೆ ಪ್ರಸ್ತಾಪ ಮಾಡಿದ್ದಾರೆ.

ಆದರೆ ಅದರ ಬೆನ್ನಲ್ಲೇ ಬಿಜೆಪಿ ಮುಖಂಡರೊಬ್ಬರು ಯಡಿಯೂರಪ್ಪನವರ ಹೆಸರು ಸೇತುವೆಗೆ ಇಡುವಂತೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

1001890073

ಇದರ ಹಿಂದೆ ಬೇರೆಯೇ ನಿರ್ಧಾರ ಇದ್ದಂತಿದೆ ಎಂಬ ಅನುಮಾನ ನಮ್ಮದು ಎಂದು ಹೇಳಿದರು.ಸೋಗಾನೆಯಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಹೆಸರು ನಾಮಕರಣ ಮಾಡುವಂತೆ ಸಂಘಟನೆ ವತಿಯಿಂದ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು.

ಅದರೆ ಹಿಂದುಳಿದ ವರ್ಗದವರೆಂಬ ಕಾರಣಕ್ಕೆ ಅದಕ್ಕೆ ಮನ್ನಣೆ ನೀಡಿಲ್ಲ ಎಂಬ ಅಸಮಾಧಾನವಿದೆ. ಈಗ ಸೇತುವೆಗೆ ಶ್ರೀಚೌಡೇಶ್ವರಿ ಹೆಸರು ಅಂತಿಮ ಮಾಡದಿದ್ದರೆ ಹೋರಾಟ ಅನಿವಾರ್ಯ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಉಡುಪಿ | ಬ್ರಹ್ಮಾವರ ಪೊಲೀಸ್ ಠಾಣೆಯ 500ಮೀ ವಾಪ್ತಿಯಲ್ಲಿ ಆ.22ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ

ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025ಕ್ಕೆ ಸಂಬಂಧಿಸಿದಂತೆ ಸಕ್ರಿಯ ಹಿಂದೂ...

Download Eedina App Android / iOS

X