ಶಿವಮೊಗ್ಗ | ಯಾವುದೇ ಸಮಯದಲ್ಲೂ ಲಿಂಗನಮಕ್ಕಿಯಿಂದ ನೀರು ಬಿಡುಗಡೆ; ಸ್ಥಳೀಯರಿಗೆ KPCL ಎಚ್ಚರಿಕೆ

Date:

ಶಿವಮೊಗ್ಗ, ನಿರಂತರ ಮಳೆ ಹಿನ್ನೆಲೆಯಲ್ಲಿ, ನಾಡಿಗೆ ಬೆಳಕು ನೀಡುವ ಲಿಂಗನಮಕ್ಕಿ ಜಲಾಶಯವು ಭರ್ತಿಯಾಗುವತ್ತ ಸಾಗಿದೆ. ಹೀಗಾಗಿ, ಯಾವುದೇ ಸಮಯದಲ್ಲೂ ಸಹ ಶರಾವತಿ ನದಿಗೆ ಹೆಚ್ಚಿನ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಪ್ರವಾಹ ಉಂಟಾಗುವ ಬಗ್ಗೆ ಕೆಪಿಸಿಎಲ್​​​​ ತನ್ನ ಪ್ರಕಟಣೆಯಲ್ಲಿ ಮುನ್ನೆಚ್ಚರಿಕೆ ನೀಡಿದೆ.

- Advertisement -

ಶರಾವತಿ ಜಲವಿದ್ಯುತ್ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ದಿನಾಂಕ:25.07.2025 ರಂದು ಮಧ್ಯಾಹ್ನ 01.00 ಘಂಟೆಗೆ ಜಲಾಶಯದ ನೀರಿನ ಮಟ್ಟವು 1806.80 (75.13%) ಅಡಿಗಳಗೆ ತಲುಪಿದೆ., ಜಲಾಶಯದ ಒಳ ಹರಿವು ಸುಮಾರು 60,000 ಕ್ಯೂಸೆಕ್​​ಗಳಿಗಿಂತಲೂ ಅಧಿಕವಾಗಿದೆ. ಇದೇ ರೀತಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಮುಂದುವರೆದರೆ, ಶೀಘ್ರದಲ್ಲಿ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ.

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು ಎಂದು ಕಾರ್ಗಲ್​ನ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯನಿರ್ವಾಹಕ ಅಭಿಯಂತರರು ತಮ್ಮ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಕೊಲೆ ಪ್ರಕರಣ: ಎಸ್‌ಐಟಿ ತನಿಖೆ ಚುರುಕು, ತಾಯಿ ಕುಸುಮಾವತಿ ರಕ್ತದ ಮಾದರಿ ಸಂಗ್ರಹ

ಧರ್ಮಸ್ಥಳದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ...

ಚಿಕ್ಕಮಗಳೂರು | ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಲು ಹೋಗಿ ಯುವಕ ಸಾವು 

ಜಿಲ್ಲೆಯ ಅಜ್ಜಂಪುರ ತಾಲೂಕಿನ ನವರಾತ್ರಿ ಸಡಗರದಲ್ಲಿದ್ದ ವೇಳೆ ಬಟ್ಟೆ ಖರೀದಿಸಲು ಹೋಗಿದ್ದ...

ವಿಜಯಪುರ | ಮತದಾರರ ಹಕ್ಕು ಕಸಿಯುವ ಪ್ರಯತ್ನ: ಎಸ್‌ಐಆರ್ ವಿರುದ್ಧ ವಿಜಯಪುರದಲ್ಲಿ ತಿರಂಗ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ...