ಶಿವಮೊಗ್ಗ, ಸಂಸದ ಬಿ ವೈ ರಾಘವೇಂದ್ರ ಕೊಳೆ ರೋಗದ ಬಗ್ಗೆ ಸಂಸತ್‌ನಲ್ಲಿ ಮಾತನಾಡುವುದಿಲ್ಲ. ಅರಣ್ಯ ಇಲಾಖೆಯ ಬಗ್ಗೆ ಮಾತನಾಡುವುದಿಲ್ಲ. ರಾಜ್ಯಕ್ಕೆ ಬರಬೇಕಾದ ತೆರಿಗೆ ಬಗ್ಗೆ ಮಾತನಾಡುವುದಿಲ್ಲ. ದೆಹಲಿಗೆ ಹೋಗಿ ಮಂತ್ರಿಗಳ ಬಳಿ ಫೋಟೋ ತೆಗೆಸಿಕೊಂಡು ಬರುತ್ತಿದ್ದಾರೆ.
ರಾಹುಲ್ ಗಾಂಧಿ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಎಂದು ಸಚಿವ ಮಧು ಬಂಗಾರಪ್ಪ ಸಂಸದರ ಬಗ್ಗೆ ಕಿಡಿಕಾರಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಸದ ರಾಘವೇಂದ್ರ ವಿರುದ್ಧ ಕಿಡಿ ಆದರು. ಸಂಸದರು ಖೇಲೋ ಇಂಡಿಯಾ ಅಂತ ಹಾಕಿಕೊಂಡಿದ್ದಾರೆ. ಕೇಂದ್ರ ಸರ್ಕಾರದವರು ಬೇಟಿ ಬಚಾವೋ ಬೇಟಿ ಪಡಾವೋ ಎಂಬ ಯೋಜನೆ ಮಾಡಿದ್ದಾರೆ. ಅವರು ಜನರನ್ನು ಮಂಗ ಮಾಡುತ್ತಿದ್ದಾರೆ. ಭಾವನಾತ್ಮಕವಾಗಿ ಮಾತನಾಡುತ್ತಿದ್ದಾರೆ ಎಂದರು.
ಇತ್ತೀಚೆಗೆ ನನ್ನ ಬಗ್ಗೆ ಫೇಸ್ ಬುಕ್‌ನಲ್ಲಿ ತನ್ನ ಮತ್ತು ಸರಕಾರದ ಬಗ್ಗೆ ಕೆಟ್ಟದಾಗಿ ಬರೆದಿದ್ದರ ಬಗ್ಗೆ ಪ್ರಸ್ತಾಪಿಸಿ, ನನ್ನ ಇಲಾಖೆಯಲ್ಲಿ ಇಂದಿನ ಶಿಕ್ಷಕರ ಕೊರತೆಗೆ ಕಾರಣ ನಿಮ್ಮದೇ ಬಿಜೆಪಿ ಸರ್ಕಾರ. ನಿಮ್ಮ ಬಿಜೆಪಿಯಲ್ಲಿ ಎಷ್ಟು ಜನರನ್ನು ನೇಮಕ ಮಾಡಿಕೊಂಡಿದ್ದೀರಿ ಎಂಬುದನ್ನು ತಿಳಿಸಿ. ಬಿಜೆಪಿಯಲ್ಲಿ ೪,೫೦೦ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದಾರಷ್ಟೇ ಎಂದರಲ್ಲದೆ,. ಕೇಂದ್ರದ ಪಠ್ಯಕ್ರಮದಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ಪಾಠ ಇಟ್ಟಿದ್ದಾರೆ. ಅದನ್ನು ಬಿಟ್ಟು ಸಿಂಧೂರ್ ಘಟನೆ ಯಾಕೆ ನಡೆಯಿತು ಎಂದು ತಿಳಿಸಬೇಕಿದೆ ಎಂದರು.
ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣದ ಕೊರತೆಯನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ತಕ್ಷಣದ ಕ್ರಮವಾಗಿ 13 ಸಾವಿರ ಶಿಕ್ಷಕರನ್ನು ನಿಯೋಜಿಸಲಾಗಿದೆ. ಶೀಘ್ರದಲ್ಲಿ 18500ಶಿಕ್ಷಕರ ನೇಮಕಾತಿಗೂ ಕ್ರಮಕೈಗೊಳ್ಳಲಾಗಿದೆ ಎಂದ ಅವರು, ಸರ್ವರಲ್ಲೂ ಸಮಾನತೆ ಕಾಣುವ ಹಿನ್ನೆಲೆಯಲ್ಲಿ ಕೈಗೊಳ್ಳಲಿರುವ ಜಾತಿಗಣತಿಯನ್ನು ಅಕ್ಟೋಬರ್ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.
ಧರ್ಮಸ್ಥಳ ವಿಚಾರ:
ಎಸ್‌ಐಟಿ ವರದಿ ಬಂದಿಲ್ಲ, ಆಗಲೇ ಬಿಜೆಪಿಯಿಂದ ಯಾತ್ರೆ ನಡೆದಿದೆ. ಬಿಜೆಪಿಯವರು ಧರ್ಮಸ್ಥಳದ ವಿಚಾರದಲ್ಲಿ ಆತುರವಾಗಿ ಮಾತನಾಡುತ್ತಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿಯವರು ಪ್ರಜ್ವಲ್ ವಿಚಾರದಲ್ಲಿ ಯಾಕೆ ಸಂತ್ರಸ್ತರ ಮನೆಗೆ ಹೋಗುತ್ತಿಲ್ಲ? ಎಂದು ಪ್ರಶ್ನಿಸಿದ ಅವರು, ಇಂದು ಧರ್ಮ ಎಂದವರು, ನಾಳೆ ಧರ್ಮವನ್ನೇ ಹಾಳು ಮಾಡುತ್ತಾರೆ.
ಹಿಂದೆ ಟ್ರಂಪ್ ಅಂತ ಹೋದವರು ಈಗ ಚೀನಾದ ಪರವಾಗಿ ಹೋಗುತ್ತಿದ್ದಾರೆ. ಮತ ಕಳವು ಮೂಲಕ ಬಿಜೆಪಿಯವರು ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಪತ್ರಿಕಾಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಮುಖಂಡರಾದ ಶ್ರೀನಿವಾಸ ಕರಿಯಣ್ಣ, ಕಲಗೋಡು ರತ್ನಾಕರ, ಖಲೀಂವುಲ್ಲಾ, ದೇವಿಕುಮಾರ್, ರಮೇಶ್ ಶೆಟ್ಟಿ , ಶೇಷಾದ್ರಿ, ರಮೇಶ್ ಹೆಗ್ಡೆ, ಜಿ ಡಿ ಮಂಜುನಾಥ, ಶರತ್ ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.