ಶಿವಮೊಗ್ಗ | ದೆವ್ವ ಬಿಡಿಸುವ ನೆಪದಲ್ಲಿ ಅಮಾಯಕ ತಾಯಿಯ ಕೊಲೆ: ಮಗ ಸೇರಿ ಮೂವರ ಬಂಧನ

Date:

ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಂಬರಘಟ್ಟೆ ಗ್ರಾಮದಲ್ಲಿ ದೆವ್ವ ಬಿಡಿಸುವ ನೆಪದಲ್ಲಿ ಗೀತ ಎಂಬ ಮಹಿಳೆಯನ್ನು ಆಶಾ ಎಂಬ ಮಹಿಳೆ ಥಳಿಸಿ ಕೊಂದ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಾದ ಆಶಾ, ಅವರ ಪತಿ ಸಂತೋಷ್ ಹಾಗೂ ಮೃತಳ ಮಗ ಸಂಜಯ್ ಎಂಬುವರನ್ನು ಬಂಧಿಸಿದ್ದಾರೆ.

- Advertisement -

ಘಟನೆ ಕುರಿತು ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು, ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿದೆ. ದೆವ್ವ ಬಿಡಿಸುವ ನೆಪದಲ್ಲಿ ಮೌಢ್ಯವನ್ನು ನಂಬಿ ಈ ಕೃತ್ಯ ಎಸಗಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಹಿನ್ನೆಲೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ, ಮೂವರನ್ನು ಬಂಧಿಸಿದ್ದೇವೆ. ತನಿಖೆ ಮುಂದುವರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಗೀತಮ್ಮ (55) ಎಂಬ ಮಹಿಳೆ ಮೃತರು. ಗೀತಮ್ಮನಿಗೆ ಮೂರು ಜನ ಮಕ್ಕಳು. ಇಬ್ಬರು ಗಂಡುಮಕ್ಕಳು ಹಾಗೂ ಓರ್ವ ಹೆಣ್ಣು ಮಗಳು ಇದ್ದಾಳೆ. ಓರ್ವ ಮಗ ಜಂಬರಘಟ್ಟ ಗ್ರಾಮದಲ್ಲಿ ಗೀತಮ್ಮನ ಜೊತೆ ವಾಸವಾಗಿದ್ದಾರೆ. ಗೀತಮ್ಮಗೆ ಯಾರೋ ತೀರಿಕೊಂಡವರು ಮೈ ಮೇಲೆ ಬಂದಿದ್ದಾರೆ ಎಂದು ಗ್ರಾಮದವರು ಮಾತನಾಡಿಕೊಳ್ಳುತ್ತಿದ್ದರು ಎಂದು ಅವರ ಮಗ ಹೇಳಿದ್ದಾರೆ. ಅದೇ ಗ್ರಾಮದಲ್ಲಿ ಆಶಾ (45) ಅವರಿಗೆ ತನ್ನ ತಾಯಿ ಮೇಲೆ ದೆವ್ವ ಬಂದಿದೆ ಎಂದು ಮೃತಳ ಮಗ ಸಂಜಯ ತಿಳಿಸಿದ್ದ. ಆಗ ಆಶಾ ಹಾಗೂ ಆಕೆಯ ಗಂಡ ಸಂತೋಷ್​ ಭಾನುವಾರ ರಾತ್ರಿ ಗೀತಮ್ಮನನ್ನು ಕರೆದುಕೊಂಡು ಹೋಗಿ ಹೊಡೆದಿದ್ದಾರೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ವಿಡಿಯೋ ಸಹ ಸಿಕ್ಕಿದೆ. ನೀರು ಕೊಡಿ ಎಂದ್ರು ಬಿಟ್ಟಿಲ್ಲ.‌ ಸುಮಾರು ನಾಲ್ಕು ತಾಸು ಹೊಡೆದಿದ್ದಾರೆ‌. ಗೀತಮ್ಮ ಪ್ರಜ್ಞೆ ತಪ್ಪಿ ಬಿದ್ದಿದ್ದು, ಅದಾದ ಬಳಿಕ ಅರ್ಧ ಗಂಟೆಗೆ ಆಕೆ ಪ್ರಾಣ ಬಿಟ್ಟಿದ್ದಾರೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಗುಜರಾತ್‌ | ವಡೋದರದಲ್ಲಿ ಕುಸಿದ ಸೇತುವೆ; ಮೂವರ ಸಾವು, ನದಿಗೆ ಉರುಳಿದ 5 ವಾಹನಗಳು

ಮೂರು ಜನ ಆರೋಪಿತರಾದ ಎ-1 ಆಶಾ, ಎ-2 ಆಶಾ ಪತಿ ಸಂತೋಷ್ ಹಾಗೂ ಎ-3 ಮೃತಳ ಮಗ ಸಂಜಯ್ ಅವರನ್ನು ಬಂಧಿಸಲಾಗಿದೆ. ಮೃತಳು ನೀರು ಕೇಳಿದ್ದರೂ ಕೂಡ, ಕೊಡದೆ ಥಳಿಸಿದ್ದಾರೆ. ಆಶಾಳ ಹಿನ್ನೆಲೆಯನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ಹಿಂದೆ ಕೂಡ ಈ ರೀತಿಯಲ್ಲಿ ಏನಾದರೂ ನಡೆಸಿರುವ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ. ಇಂದಿನ ಆಧುನಿಕ ಕಾಲಘಟ್ಟದಲ್ಲೂ ಈ ರೀತಿ ನಡೆದುಕೊಳ್ಳುವುದನ್ನು ನೋಡಿ ನಮಗೆ ಆಶ್ಚರ್ಯ ಆಗುತ್ತದೆ. ಈ ರೀತಿಯ ಘಟನೆ ಕಂಡುಬಂದರೆ ನಮಗೆ ತಿಳಿಸಬೇಕೆಂದು ಗ್ರಾಮಸ್ಥರಿಗೆ ತಿಳಿಸಲಾಗಿದೆ.ಯಾವುದೇ ಪ್ರದೇಶದಲ್ಲಿ ಈ ರೀತಿಯ ಮೌಢ್ಯ ಕಂಡು ಬಂದರೆ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ.

ಮೌಢ್ಯಗಳಿಗೆ ಕಿವಿಗೊಡಬಾರದು ಎಂದು ತಾಕೀತು ಮಾಡಲಾಗಿದೆ. ದೇವರು, ದೆವ್ವ ಬಂದಿದೆ ಎಂದು ಹಲ್ಲೆ ನಡೆಸಬಾರದು. ಅವರವರ ನಂಬಿಕೆ ಅವರ ಮನೆಯಲ್ಲಿ ಇರಬೇಕು. ಈ ರೀತಿ ಮಾಡಬಾರದು ಎಂದು ಹೇಳಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...