ಶಿವಮೊಗ್ಗ | ಪಂಚ ಗ್ಯಾರಂಟಿ ಮೂಲಕ ದೇಶದಲ್ಲಿ ಮಹಿಳಾ ಕ್ರಾಂತಿ : ಸೌಮ್ಯಾ ರೆಡ್ಡಿ ಹೇಳಿಕೆ

Date:

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ದೇಶದಲ್ಲಿ ಮಹಿಳೆಯರಿಂದ ಒಂದು ಕ್ರಾಂತಿ ಆರಂಭವಾಗಿದೆ. ಅಧ್ಯಯನದ ವರದಿ ಪ್ರಕಾರ, ಈ ಯೋಜನೆಗಳ ಫಲವಾಗಿ ಶೇ. ೧೬ರಷ್ಟು ಮಹಿಳೆಯರು ಉದ್ಯೋಗ ಕಂಡುಕೊಂಡಿದ್ದಾರೆ ಮತ್ತು ಶೈಕ್ಷಣಿಕ ಪ್ರಗತಿಯೂ ಆಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದರು.

- Advertisement -

ನಗರದ ಬಂಜಾರ ಕನ್ವೆನ್ಶನ್ ಹಾಲ್‌ನಲ್ಲಿ ಜಿಲ್ಲಾ ನೂತನ ಅಧ್ಯಕ್ಷೆಯಾಗಿರುವ ಶ್ವೇತಾ ಬಂಡಿ ಅವರಿಗೆ ಅಧಿಕಾರ ಪದಗ್ರಹಣ ಮಾಡಿ ಅವರು ಮಾತನಾಡಿದರು.ಪಕ್ಷವು ತಾಯಿಯಿದ್ದಂತೆ. ಕಾರ್ಯಕರ್ತರ ಪರಿಶ್ರಮದಿಂದಲೇ ಪಕ್ಷವು ಅಧಿಕಾರಕ್ಕೆ ಬಂದಿದೆ. ಇದನ್ನು ಗಮನಿಸಿ ಕೆಲಸ ಮಾಡಬೇಕು. ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ಹುದ್ದೆ ದೊಡ್ಡ ಜವಾಬ್ದಾರಿಯದ್ದು. ಆದ್ದರಿದಂದ ಅದನ್ನು ಎಚ್ಚರಿಕೆಯಿಂದ ನಿಭಾಯಿಸಬೇಕೆಂದ ಅವರು, ದೇಶದಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಲು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರೇ ಕಾರಣಕರ್ತರು ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಹಿಳೆಯರು ಮನೆ ಮನೆಗೆ ತೆರಳಿ ಜನರಿಗೆ ತಿಳಿಸುವ ವಿಶೇಷ ಜವಾಬ್ದಾರಿ ಇದೆ. ನಾವೆಲ್ಲರೂ ಒಗ್ಗೂಡಿ ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡೋಣ ಎಂದು ಸೌಮ್ಯಾ ರೆಡ್ಡಿ ಕಾರ್ಯಕರ್ತರಿಗೆ ಕರೆ ನೀಡಿದರು.

ಮೈಲಿಗಲ್ಲು:

ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡ ಶ್ವೇತಾ ಬಂಡಿ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ ತುಂಬಿದೆ.

ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ ನಡುವೆ ಇಡದೆ, ಅವರಿಗೆ ಶಕ್ತಿ ತುಂಬಿ ಸಬಲೀಕರಣಗೊಳಿಸಿದೆ. ‘ಇದು ಒಂದು ಮೈಲಿಗಲ್ಲು’ ಎಂದು ಬಣ್ಣಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...