ಶಿವಮೊಗ್ಗ, ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ, ಶೈಕ್ಷಣಿಕ, ಆರ್ಥಿಕ, ಸಾಮಾಜಕ ಗಣತಿಯನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ `ಜಾತಿ ಗಣತಿ ಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿದೆ ಎಂದು ರಾಷ್ಟ್ರ ಭಕ್ತರ ಬಳದ ಅಧ್ಯಕ್ಷ ಕೆ ಎಸ್. ಈಶ್ವರಪ್ಪ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಈ ಹಿಂದೆ ನಡೆಸಿದ ಗಣತಿಯನ್ನೇ ಯತಾವತ್ತಾಗಿ ಜಾರಿಗೆ ತರುತ್ತೇನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ನಂತರ ಹೈಕಮಾಂಡ್ ಒತ್ತಡಕ್ಕೆ ಮಣಿದು ಮತ್ತೆ ಜನಗಣತಿ ಮಾಡುವುದಾಗಿ ಹೇಳಿದ್ದರು.
150 ಕೋಟಿಗೂ ಅಧಿಕ ಹಣವನ್ನು ವ್ಯಯಿಸಿ ಮಾಡಿದ ಗಣತಿಯನ್ನು ಬುಟ್ಟಿಗೆ ಎಸೆದು ಈಗ ಮತ್ತೆ ಸುಮಾರು 420 ಕೋಟಿ ವೆಚ್ಚದಲ್ಲಿ ಗಣತಿ ಮಾಡಹೊರಟಿದ್ದಾರೆ ಎಂದರು.
ಗಣತಿ ಹೆಸರಿನಲ್ಲಿ ಹಿಂದೂಗಳನ್ನು ಒಡೆದು ತನ್ನ ವೋಟ್ ಬ್ಯಾಂಕ್‌ಗಳನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಸ್ಪಷ್ಟವಾಗಿ ಕಾರ್ಯಾನಿರ್ವಹಿಸುತ್ತಿದೆ.
ಈ ಹಿಂದಿನ, ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿರುವ ಜಾತಿ ಪಟ್ಟಿಯಲ್ಲಿ ಮತಾಂತರಗೊಂಡ ಹಿಂದೂಗಳು ಆಗಾಗಿಯೇ ಹೆಚ್ಚುವರಿ ಜಾತಿಗಳನ್ನು ಸೃಷ್ಠಿಸಿ ಕುರುಬ ಕ್ರಿಶ್ಚಿಯನ್, ಅಂಗಾಯತ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್.
ಈ ರೀತಿ ಸುಮಾರು 50 ಕ್ಕೂ ಹೆಚ್ಚು ಜಾತಿಗಳನ್ನು ಕ್ರಿಶ್ಚಿಯನ್ ಧರ್ಮದ ಹೆಸರಿನಲ್ಲಿ ಸೇರಿಸಿ ಹಿಂದೂಯೇತರ ಧರ್ಮೀಯರ ಜನಸಂಖ್ಯೆಯನ್ನು ವ್ಯವಸ್ಥಿತವಾಗಿ ಹೆಚ್ಚು ತೋರಿಸುವ ಕಲಸವನ್ನು ಕಾಂಗ್ರೇಸ್ ಸರ್ಕಾರ ಮಾಡುತ್ತಿದೆ ಎಂದರು.
ಈ ರೀತಿ ಮಾಡುವುದರಿಂದ ಹಿಂದೂಗಳಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮತಾಂತರಗೊಂಡವರು ಕಬಳಿಸುವ ಪ್ರಯತ್ನಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ.
ಸಂವಿಧಾನದಲ್ಲಿರುವ ಆರು ಧರ್ಮಗಳ ಹೊರತಾಗಿ ಬೇರೆ ಯಾವುದೇ ಧರ್ಮಗಳ ಸೇರ್ಪಡೆ ಸಂವಿಧಾನ ವಿರೋಧಿಯಾಗಿದ್ದರೂ ಮತಾಂತರಗೊಂಡ ಕ್ರೈಸ್ತರು ಎಂಬ ಹೊಸ ಧರ್ಮವನ್ನು ಕಾಂಗ್ರೆಸ್ ಹುಟ್ಟು ಹಾಕಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಹಿಂದುಳಿದ ಆಯೋಗದ ಮುಖಾಂತರ ಪ್ರಕಟಿಸಿರುವ ಈ ಸಂವಿಧಾನ ಬಾಹಿರ ಹಿಂದೂ ಜಾತಿಗಳ ಹೆಸರಿನೊಂದಿಗಿನ “ಕ್ರಿಶ್ಚಿಯನ್ ಹೆಸರಿನ ಪಟ್ಟಿಯನ್ನು ಈ ಕೂಡಲೇ ಹಿಂಪಡೆದು ಆಗಿರುವ ಪ್ರಮಾದಕ್ಕೆ ಹಿಂದೂಗಳ ಕ್ಷಮೆ ಕೋರಬೇಕು ಹಾಗೂ ಈ ತಿಂಗಳ 22 ರಂದು ಆರಂಭವಾಗುವ ಸಮೀಕ್ಷೆಯಲ್ಲಿ ಮತ್ತೆ ಇಂತಹ ತಪ್ಪುಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.