ಶಿವಮೊಗ್ಗ | ಜಾತಿಗಣತಿ ಹೆಸರಲ್ಲಿ ಧರ್ಮ ಒಡೆಯುವ ಕೆಲಸ : ಕೆ. ಎಸ್. ಈಶ್ವರಪ್ಪ

Date:

ಶಿವಮೊಗ್ಗ, ಜಾತಿ ಗಣತಿಯ ಪ್ರಕ್ರಿಯೆ ಪ್ರಾರಂಭವಾಗಿದೆ, ಶೈಕ್ಷಣಿಕ, ಆರ್ಥಿಕ, ಸಾಮಾಜಕ ಗಣತಿಯನ್ನು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ `ಜಾತಿ ಗಣತಿ ಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿದೆ ಎಂದು ರಾಷ್ಟ್ರ ಭಕ್ತರ ಬಳದ ಅಧ್ಯಕ್ಷ ಕೆ ಎಸ್. ಈಶ್ವರಪ್ಪ ಆರೋಪಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಈ ಹಿಂದೆ ನಡೆಸಿದ ಗಣತಿಯನ್ನೇ ಯತಾವತ್ತಾಗಿ ಜಾರಿಗೆ ತರುತ್ತೇನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ನಂತರ ಹೈಕಮಾಂಡ್‌ ಒತ್ತಡಕ್ಕೆ ಮಣಿದು ಮತ್ತೆ ಜನಗಣತಿ ಮಾಡುವುದಾಗಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

150 ಕೋಟಿಗೂ ಅಧಿಕ ಹಣವನ್ನು ವ್ಯಯಿಸಿ ಮಾಡಿದ ಗಣತಿಯನ್ನು ಬುಟ್ಟಿಗೆ ಎಸೆದು ಈಗ ಮತ್ತೆ ಸುಮಾರು 420 ಕೋಟಿ ವೆಚ್ಚದಲ್ಲಿ ಗಣತಿ ಮಾಡಹೊರಟಿದ್ದಾರೆ ಎಂದರು.

ಗಣತಿ ಹೆಸರಿನಲ್ಲಿ ಹಿಂದೂಗಳನ್ನು ಒಡೆದು ತನ್ನ ವೋಟ್ ಬ್ಯಾಂಕ್‌ಗಳನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಸ್ಪಷ್ಟವಾಗಿ ಕಾರ್ಯಾನಿರ್ವಹಿಸುತ್ತಿದೆ.

ಈ ಹಿಂದಿನ, ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿರುವ ಜಾತಿ ಪಟ್ಟಿಯಲ್ಲಿ ಮತಾಂತರಗೊಂಡ ಹಿಂದೂಗಳು ಆಗಾಗಿಯೇ ಹೆಚ್ಚುವರಿ ಜಾತಿಗಳನ್ನು ಸೃಷ್ಠಿಸಿ ಕುರುಬ ಕ್ರಿಶ್ಚಿಯನ್, ಅಂಗಾಯತ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್.

ಈ ರೀತಿ ಸುಮಾರು 50 ಕ್ಕೂ ಹೆಚ್ಚು ಜಾತಿಗಳನ್ನು ಕ್ರಿಶ್ಚಿಯನ್ ಧರ್ಮದ ಹೆಸರಿನಲ್ಲಿ ಸೇರಿಸಿ ಹಿಂದೂಯೇತರ ಧರ್ಮೀಯರ ಜನಸಂಖ್ಯೆಯನ್ನು ವ್ಯವಸ್ಥಿತವಾಗಿ ಹೆಚ್ಚು ತೋರಿಸುವ ಕಲಸವನ್ನು ಕಾಂಗ್ರೇಸ್ ಸರ್ಕಾರ ಮಾಡುತ್ತಿದೆ ಎಂದರು.

ಈ ರೀತಿ ಮಾಡುವುದರಿಂದ ಹಿಂದೂಗಳಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮತಾಂತರಗೊಂಡವರು ಕಬಳಿಸುವ ಪ್ರಯತ್ನಕ್ಕೆ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ.

ಸಂವಿಧಾನದಲ್ಲಿರುವ ಆರು ಧರ್ಮಗಳ ಹೊರತಾಗಿ ಬೇರೆ ಯಾವುದೇ ಧರ್ಮಗಳ ಸೇರ್ಪಡೆ ಸಂವಿಧಾನ ವಿರೋಧಿಯಾಗಿದ್ದರೂ ಮತಾಂತರಗೊಂಡ ಕ್ರೈಸ್ತರು ಎಂಬ ಹೊಸ ಧರ್ಮವನ್ನು ಕಾಂಗ್ರೆಸ್ ಹುಟ್ಟು ಹಾಕಿದೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಹಿಂದುಳಿದ ಆಯೋಗದ ಮುಖಾಂತರ ಪ್ರಕಟಿಸಿರುವ ಈ ಸಂವಿಧಾನ ಬಾಹಿರ ಹಿಂದೂ ಜಾತಿಗಳ ಹೆಸರಿನೊಂದಿಗಿನ “ಕ್ರಿಶ್ಚಿಯನ್ ಹೆಸರಿನ ಪಟ್ಟಿಯನ್ನು ಈ ಕೂಡಲೇ ಹಿಂಪಡೆದು ಆಗಿರುವ ಪ್ರಮಾದಕ್ಕೆ ಹಿಂದೂಗಳ ಕ್ಷಮೆ ಕೋರಬೇಕು ಹಾಗೂ ಈ ತಿಂಗಳ 22 ರಂದು ಆರಂಭವಾಗುವ ಸಮೀಕ್ಷೆಯಲ್ಲಿ ಮತ್ತೆ ಇಂತಹ ತಪ್ಪುಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...