ಶಿವಮೊಗ್ಗ | ಸಂವಿಧಾನದ ಆಶಯಗಳಂತೆ ನಡೆದುಕೊಳ್ಳುವುದೇ ನಿಜವಾದ ಸಂವಿಧಾn ದಿನದ ಆಚರಣೆ: ನ್ಯಾ. ಜಿ.ಎ ಮಂಜುನಾಥ

Date:

ಭಾರತದ ಸಂವಿಧಾನವನ್ನು ಪ್ರಜೆಗಳಾದ ನಾವು ನಮಗಾಗಿ ಅರ್ಪಿಸಿಕೊಂಡ ದಿನದ ಪ್ರಯುಕ್ತ ಇಂದು ಸಂವಿಧಾನ ದಿನಾಚರಣೆಯನ್ನು ನಾವು ಆಚರಿಸುತ್ತಿದ್ದು ಇದರ ನಿಜವಾದ ಆಚರಣೆಯು ಸಂವಿಧಾನದ ಆಶಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ.ಎ ಮಂಜುನಾಥ ಹೇಳಿದ್ದಾರೆ.

- Advertisement -

ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಜಂಟಿಯಾಗಿ ಶಿವಮೊಗ್ಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು, ಯಾರಿಗೂ ಜಾತಿ, ಲಿಂಗ ಅಥವಾ ಅಧಿಕಾರದ ಆಧಾರದ ಮೇಲೆ ಮತದಾನದಲ್ಲಿ ತಾರತಮ್ಯವಿಲ್ಲ ಆದ್ದರಿಂದ ಸಂವಿಧಾನದಲ್ಲಿ ನಾವೆಲ್ಲರೂ ಸಮಾನರು. ನಮ್ಮ ಆಡಳಿತವನ್ನು ನಾವೇ ಮಾಡಿಕೊಳ್ಳುವಂತಹ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ನಮ್ಮ ಸಂವಿಧಾನವನ್ನು ನಾವು ನಮಗೆ ಅರ್ಪಿಸಿಕೊಂಡಿದ್ದೇವೆ. ಆದ್ದರಿಂದ ನಮ್ಮ ನಿತ್ಯದ ಜೀವನದಲ್ಲಿ ನಾವು ಸಂವಿಧಾನದ ಆಶಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ ಒಂದೇ ವರ್ಷದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ 500 ವ್ಯಕ್ತಿಗಳ ಸಂಪತ್ತು ಸುಮಾರು 2.2 ಟ್ರಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಇನ್ನೊಂದು ಕಡೆ,...

ಸಂವಿಧಾನಕ್ಕೆ 77 – ಈಡೇರದ ಕನಸು…..

ಸಂವಿಧಾನ ದಿನ ಒಂದು ಬಗೆಯ ಲಯವಿದೆ. ಅಂದು ಮುಂಜಾನೆಯಿಂದ ಇರುಳಿನವರೆಗೂ ಸಂವಿಧಾನದ್ದೇ ಸದ್ದು. ಅದರ ಮಹತ್ವ, ಅಗತ್ಯ, ಅನಿವಾರ್ಯತೆ, ಅನುಕೂಲತೆ ಬಗ್ಗೆ ಸ್ಮರಿಸಿಕೊಂಡು ಸಂಭ್ರಮಿಸುತ್ತೇವೆ. ಪ್ರಧಾನಿಯಿಂದ ಗ್ರಾಮ ಪಂಚಾಯಿತಿ ಸದಸ್ಯರವರೆಗೂ ಪ್ರಶ್ನಿಸಲು ಇರುವ "ಅಧಿಕಾರಭಾಗ್ಯ"...

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ...

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ ಸಮಿತಿಯ ಒಂದು ವರ್ಷದ ಅಭಿಯಾನ; ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಹೊಸ ಸಂಕಲ್ಪ ನಮಗೆ ಸ್ವಾತಂತ್ರ್ಯ ಬಂದು ಏಳು ದಶಕಗಳಿಗೂ...

ಶ್ರೀ ಕೇಶವಾನಂದ ಭಾರತಿ ಪ್ರಕರಣದಲ್ಲಿ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು ಸಂವಿಧಾನದ ಮೂಲತತ್ವಗಳನ್ನು ಶಾಸಕಾಂಗವು ತಿದ್ದುಪಡಿ ಮಾಡುವಂತಿಲ್ಲ ಎಂಬುವ ಮಹತ್ವವಾದ ತೀರ್ಪನ್ನು ನೀಡುವ ಮೂಲಕ ನಮ್ಮ ಸಂವಿಧಾನದ ಮೂಲ ತತ್ವಗಳನ್ನು ಭದ್ರಪಡಿಸಿದೆ. ಅಂತಹ ಮೂಲತತ್ವಗಳನ್ನು ನಾವೆಲ್ಲರೂ ಅರ್ಥಪೂರ್ಣವಾಗಿ ಪಾಲಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಜಿ ಆರ್ ರಾಘವೇಂದ್ರ ಸ್ವಾಮಿ ರವರು ಮಾತನಾಡಿ ನಮ್ಮ ಸಂವಿಧಾನ ಪ್ರಪಂಚದಲ್ಲೇ ಅತಿ ದೊಡ್ಡ ಸಂವಿಧಾನವಾಗಿದ್ದು ಇದರಲ್ಲಿ ಅನೇಕ ತತ್ವಗಳು ಇಂದಿಗೂ ಪ್ರಚಲಿತವಾಗಿ. ಸಂವಿಧಾನವನ್ನು ಬಹು ದಶಕಗಳ ಹಿಂದೆ ನಾವು ನಮಗೆ ಅರ್ಪಿಸಿಕೊಂಡರು ಇಂದಿಗೂ ಅದು ಎಲ್ಲರ ಜೀವನಕ್ಕೂ ಮತ್ತು ಎಲ್ಲಾ ವರ್ಗಗಳಿಗೂ ಅನ್ವಯಿಸುವಂತೆ ಮಾಡಿರುವುದು ನ್ಯಾಯಾಂಗದ ಮಹತ್ತರ ಕೊಡುಗೆಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಾಂಗ ಮತ್ತು ಶಾಸಕಾಂಗವನ್ನು ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವ ನಿಟ್ಟಿನಲ್ಲಿ ಅನೇಕ ಮಹತ್ವದ ತೀರ್ಪನ್ನು ನೀಡುವ ಮೂಲಕ ನಮ್ಮ ಸಂವಿಧಾನವನ್ನು ಮತ್ತು ಅದರ ಮೂಲಭೂತ ತತ್ವಗಳನ್ನು ರಕ್ಷಿಸುವಲ್ಲಿ ನ್ಯಾಯಾಂಗ ಉನ್ನತವಾದ ಕೊಡುಗೆ ನೀಡಿದೆ ಎಂದು ಸ್ಮರಿಸಿದರು. ವಿಶ್ವದ ಅನೇಕ ದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಅನೇಕ ರಾಷ್ಟ್ರಗಳು ಇಂದಿಗೂ ಕಷ್ಟ ಪಡುತ್ತಿರುವ ಸಮಯದಲ್ಲಿ ನಮ್ಮ ಭಾರತವನ್ನು ವಿಕಸನದತ್ತ ಕೊಂಡೊಯ್ಯುವಲ್ಲಿ ಸಂವಿಧಾನ ಮತ್ತು ನ್ಯಾಯಾಂಗದ ಕೊಡುಗೆ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಸಂತೋಷ್ ಎಂ ಎಸ್ ರವರು ಸಂವಿಧಾನ ಪೀಠಿಕೆಯನ್ನು ಪಠಣ ಮಾಡಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಎಲ್ಲಾ ಗೌರವಾನ್ವಿತ ನ್ಯಾಯಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು ಮತ್ತು ನ್ಯಾಯವಾದಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯಾಂಗದ ಎಲ್ಲಾ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಕಾರಣದಲ್ಲಿ ಮುಂದೆ ಬರಬೇಕೆಂದಿದ್ದರೆ ಮೋದಿ ಜೊತೆ ನಿಲ್ಲುವಂತೆ ಪ್ರಣಬ್ ಮುಖರ್ಜಿ ಸಲಹೆ ನೀಡಿದ್ದರು: ಸುವೇಂದು ಅಧಿಕಾರಿ

ರಾಜಕಾರಣದಲ್ಲಿ ಮುಂದೆ ಬರಬೇಕೆಂದಿದ್ದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನರೇಂದ್ರ ಮೋದಿ...

‘ಆಶಾ’ಗಳು ಇದ್ದರೂ ನಡೆಯುತ್ತೆ, ಇಲ್ಲದಿದ್ದರೂ ನಡೆಯುತ್ತೆ: ಆರೋಗ್ಯ ಸಚಿವ ಯು.ಟಿ ಖಾದರ್

ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು...

ಸಂವಿಧಾನಕ್ಕೆ 77 – ಈಡೇರದ ಕನಸು…..

ಸಂವಿಧಾನ ದಿನ ಒಂದು ಬಗೆಯ ಲಯವಿದೆ. ಅಂದು ಮುಂಜಾನೆಯಿಂದ ಇರುಳಿನವರೆಗೂ ಸಂವಿಧಾನದ್ದೇ...

ಹವಾಮಾನ ವರದಿ: ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ

ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಮತ್ತು...