ಶಿವಮೊಗ್ಗ | 74,000 ಅಡಿಕೆ ಮರಗಳನ್ನು ನೆಟ್ಟಿದ್ದೇನೆ, ಕೃಷಿಕರ ಸಮಸ್ಯೆ ಬಗ್ಗೆ ಅರಿವಿದೆ: ಸಚಿವ ಮಧು ಬಂಗಾರಪ್ಪ

Date:

ಸಹಕಾರ ಸಂಘಗಳು ರೈತರ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಬೇಕು. ರೈತರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವುದೇ ಸಹಕಾರ ಚಳವಳಿಯ ಮೂಲ ಆಶಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

- Advertisement -

ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಅಪೆಕ್ಸ್ ಬ್ಯಾಂಕ್, ಶಿವಮೊಗ್ಗ ಹಾಲು ಒಕ್ಕೂಟ (ಶಿಮುಲ್) ಹಾಗೂ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಸೇರಿದಂತೆ ವಿವಿಧ ಸಹಕಾರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 73ನೇ ರಾಜ್ಯಮಟ್ಟದ ಸಹಕಾರ ಸಪ್ತಾಹದ ನಾಲ್ಕನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

“ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 1.48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರು ಅಡಕೆ ಕೃಷಿ ಮಾಡುತ್ತಿದ್ದಾರೆ. ನಾನೂ ಒಬ್ಬ ರೈತನಾಗಿದ್ದು, ಸ್ವತಃ 74 ಸಾವಿರ ಅಡಿಕೆ ಮರಗಳನ್ನು ನೆಟ್ಟಿದ್ದೇನೆ. ಅವುಗಳಲ್ಲಿ ಪ್ರಸ್ತುತ 55 ಸಾವಿರ ಮರಗಳು ಫಲ ನೀಡುತ್ತಿವೆ. ರೈತರ ಕಷ್ಟ, ಕೃಷಿಯ ಸವಾಲುಗಳು ಮತ್ತು ಅವರ ನಿರೀಕ್ಷೆಗಳು ನನಗೆ ಚೆನ್ನಾಗಿ ತಿಳಿದಿವೆ. ರೈತರನ್ನು ಸಂತೋಷಪಡಿಸುವ ನಿಟ್ಟಿನಲ್ಲಿ ಸಹಕಾರ ಸಂಘಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು” ಎಂದರು.

ಸಹಕಾರ ಚಳವಳಿಯನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ ಪ್ರಯತ್ನಗಳು ಸರಿಯಲ್ಲ. ಸಹಕಾರಿ ಸಂಘಗಳ ಪದಾಧಿಕಾರಿಗಳು ಸಂಘಗಳಿಗೆ ಸಂಬಂಧಿಸಿದ ದೂರುಗಳಿಗೆ ಸೂಕ್ತವಾಗಿ ಸ್ಪಂದಿಸಬೇಕು. ಸಂಘಗಳ ಕಾರ್ಯ ಚಟುವಟಿಕೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

“ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡಿರುವ ಕಾರ್ಯಗಳಿಗೆ ವಿರೋಧ ಪಕ್ಷದವರಿಂದಲೂ ಉತ್ತಮ ಶಿಕ್ಷಣ ಸಚಿವ ಎಂಬ ಶ್ಲಾಘನೆ ವ್ಯಕ್ತವಾಗಿರುವುದು ಸಂತಸದ ವಿಚಾರ. ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದರ ಜೊತೆಗೆ ಸಮಾಜದ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ” ಎಂದು ಹೇಳಿದರು.

ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಚಿವ ಮಧು ಬಂಗಾರಪ್ಪ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರು ಸಹಕಾರ ವಸ್ತುಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿದರು.ಇದೇ ಸಂದರ್ಭದಲ್ಲಿ ನಟ ಟೆನ್ನಿಸ್ ಕೃಷ್ಣ ಹಾಗೂ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ.ಎಸ್. ಅರುಣ್, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್. ರವಿ, ಎಡಿಸಿ ಅಭಿಷೇಕ್, ಶಿಮುಲ್ ಅಧ್ಯಕ್ಷ ವಿದ್ಯಾಧರ, ಶರಣಗೌಡ ಭಯ್ಯಾಪುರ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷ ಬಿ.ಕೆ. ಶಿವಕುಮಾರ್, ಶರಣಗೌಡ ಪಾಟೀಲ, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಸಹಕಾರಿ ಧುರೀಣರಾದ ಎಸ್.ಕೆ. ಮರಿಯಪ್ಪ, ಎಂ. ಶ್ರೀಕಾಂತ್, ಸಿ. ಹನುಮಂತು, ವಿಜಯಕುಮಾರ್, ಮಹೇಶ್ ಹುಲ್ಕುಳಿ ಸೇರಿದಂತೆ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...