ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

Date:

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಸ್ಮಾರ್ಟ್ ಎನ್‌ಫೋರ್ಸ್‌ಮೆಂಟ್ ವ್ಯವಸ್ಥೆ ಅಳವಡಿಸಿಕೊಳ್ಳುವ ಮೂಲಕ ಅಪಘಾತ ವಲಯಗಳ ವೈಜ್ಞಾನಿಕ ಸುಧಾರಣೆ ಮತ್ತು ತ್ವರಿತ ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ.

- Advertisement -

ಎ.ಐ (AI) ಕ್ಯಾಮೆರಾ ಸುಧಾರಣೆ: ಸಂಚಾರ ನಿಯಮ ಉಲ್ಲಂಘನೆ ಮತ್ತು ಅಪಘಾತ ಮಾಡಿ ಪರಾರಿಯಾಗುವ (ಹಿಟ್ ಅಂಡ್ ರನ್) ವಾಹನಗಳನ್ನು ಪತ್ತೆಹಚ್ಚಲು ಗುರುತಿಸಲಾದ 87 ಸ್ಥಳಗಳ ಪೈಕಿ 27 ಕಡೆ ಎ.ಐ ಆಧಾರಿತ ಸ್ಮಾರ್ಟ್ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 20 ಕಡೆ ಇ-ಚಲನ್ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಈಗಾಗಲೇ 6,500 ಚಲನ್‌ಗಳನ್ನು ದಾಖಲಿಸಲಾಗಿದ್ದು, ಉಳಿದ 60 ಸ್ಥಳಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ (MoRTH) ಗುರುತಿಸಿರುವ ಅಪಘಾತ ಸಂಭವಿಸುವ ಬ್ಲಾಕ್ ಸ್ಪಾಟ್ ಗಳಲ್ಲಿ (Black Spots) ಅಲ್ಪಾವಧಿ ಮತ್ತು ದೀರ್ಘಾವಧಿ ಸುಧಾರಣಾ ಕಾಮಗಾರಿಗಳನ್ನು ಚುರುಕುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಚಾಲನಾ ಪರವಾನಗಿ ಪರೀಕ್ಷೆಗೂ ಮುನ್ನ ಜಾಗೃತಿ ವಿಡಿಯೋ ಕಡ್ಡಾಯ:

ಚಾಲನಾ ತರಬೇತಿ ಸಂಸ್ಥೆಗಳ ಮೇಲೆ ಸಾರಿಗೆ ಇಲಾಖೆ ನಿರಂತರ ನಿಗಾ ಇಡಬೇಕು ಹಾಗೂ ಚಾಲನಾ ಪರವಾನಗಿ (DL) ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಹೆಲ್ಕೆಟ್, ಸೀಟ್ ಬೆಲ್ಟ್, ವೇಗ ನಿಯಂತ್ರಣ, ಮದ್ಯಪಾನ ಮತ್ತು ಮೊಬೈಲ್ ಬಳಕೆ ನಿಷೇಧದ ಕುರಿತ ಜಾಗೃತಿ ವಿಡಿಯೋಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ವಿಡಿಯೋ ವೀಕ್ಷಿಸಿ ನಿಯಮಗಳನ್ನು ಅರಿತಿರುವ ಬಗ್ಗೆ ಅಭ್ಯರ್ಥಿಗಳಿಂದ ಸಹಿ ಪಡೆಯುವ ವ್ಯವಸ್ಥೆ ಜಾರಿಗೆ ತರುವಂತೆ ಸಾರಿಗೆ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ತುರ್ತು ಚಿಕಿತ್ಸೆಗೆ ರೂ. 2.50 ಲಕ್ಷದವರೆಗೆ ನಗದುರಹಿತ ನೆರವು:

ಪಿಎಂ-ರಹತ್ & ಸಿಎಂ-ಆರ್ಕ್ (CM-ArK): 2026ರ ಏಪ್ರಿಲ್ 15ರಿಂದ ಜಾರಿಯಾಗಿರುವ ‘ಪಿಎಂ-ರಹತ್’ ಯೋಜನೆಯಡಿ ಅಪಘಾತದ ಸಂತ್ರಸ್ತರಿಗೆ 7 ದಿನಗಳವರೆಗೆ ಗರಿಷ್ಠ ರೂ.1.50 ಲಕ್ಷದವರೆಗೆ ನಗದುರಹಿತ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ‘ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ’ ಯೋಜನೆಯಡಿ ಹೆಚ್ಚುವರಿ ರೂ. 1.00 ಲಕ್ಷ ಸೇರಿದಂತೆ ಒಟ್ಟು ರೂ. 2.50 ಲಕ್ಷದವರೆಗೆ ಚಿಕಿತ್ಸಾ ನೆರವು ಲಭ್ಯವಿದೆ. ರಾಜ್ಯದ 3,445 ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಈ ಯೋಜನೆಯಡಿ ನೋಂದಣಿಯಾಗಿವೆ.

100 ಹೊಸ ಆಂಬುಲೆನ್ಸ್:

4Gತುರ್ತು ಸ್ಪಂದನೆಗಾಗಿ 108 ಮತ್ತು 102 ಸೇವೆಗಳನ್ನು 112 ಸಹಾಯವಾಣಿಯೊಂದಿಗೆ ಸಂಯೋಜಿಸಲಾಗಿದೆ. ಜೊತೆಗೆ 100 ಹೊಸ ಬಿಎಲ್‌ಎಸ್‌ (BLS) ಆಂಬುಲೆನ್ಸ್‌ಗಳ ಖರೀದಿ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸೇವೆಗೆ ಲಭ್ಯವಾಗಲಿವೆ. ಜಿಲ್ಲಾ ಆಸ್ಪತ್ರೆಗಳ ತೀವ್ರ ನಿಗಾ ಘಟಕಗಳನ್ನು (ICU) ಮೇಲ್ದರ್ಜೆಗೇರಿಸಲಾಗುತ್ತಿದೆ.ರೂ. 322 ಕೋಟಿ ಕ್ರಿಯಾ ಯೋಜನೆ:2026-27ನೇ ಸಾಲಿನ ರಸ್ತೆ ಸುರಕ್ಷತಾ ಕ್ರಮಗಳಿಗಾಗಿ ಒಟ್ಟು ರೂ. 322 ಕೋಟಿ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು, ಇದರಲ್ಲಿ ರೂ. 233.11 ಕೋಟಿಯನ್ನು ಮುಂದುವರಿದ ಕಾಮಗಾರಿಗಳಿಗೆ ಹಾಗೂ ರೂ. 88.89 ಕೋಟಿಯನ್ನು ಹೊಸ ಕಾಮಗಾರಿಗಳಿಗೆ ಮೀಸಲಿಡಲಾಗಿದೆ.

ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮಾಧ್ಯಮಗಳು, ಚಿತ್ರಮಂದಿರಗಳು ಮತ್ತು ಬಸ್ ನಿಲ್ದಾಣಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಲಾಗುವುದು ಎಂದು ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...