ಭದ್ರಾವತಿ | ಎಐ ಆಳುವವರ, ಬಂಡವಾಳಶಾಹಿಗಳ ಸಾಧನವಾಗದಿರಲಿ: ವಿವಿ ಪ್ರಾಧ್ಯಾಪಕ ಪ್ರವೀಣ್ ಜಿ ಸಪ್ತರ್ಷಿ

Date:

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು,” ಕೃತಕ ಬುದ್ಧಿಮತ್ತೆ ನಮ್ಮೆದುರಿನ ವಾಸ್ತವಿಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಆಳುವವರು ಮತ್ತು ಬಂಡವಾಳಶಾಹಿಗಳ ಕೈಯಲ್ಲಿರುವ ಸಾಧನವಾಗಬಾರದು” ಎಂದು ಅಮೆರಿಕಾದ ಸಾಲಿಸ್‌ಬರಿ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕ ಪ್ರವೀಣ್.ಜಿ.ಸಪ್ತರ್ಷಿ ನುಡಿದರು.

- Advertisement -

ಅವರು ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ “ಕೃತಕ ಬುದ್ಧಿಮತ್ತೆ ಮತ್ತು ಸಮಾಜ” ಕುರಿತ ಒಂದು ದಿನದ ಬಹುಶಿಸ್ತೀಯ ಅಂತಾರಾಷ್ಟ್ರೀಯ ವಿಚಾರ ಸಂಕಿರಣದ ದಿಕ್ಸೂಚಿ ಭಾಷಣಕಾರರಾಗಿ ಪ್ರಸಕ್ತ ಬೆಳವಣಿಗೆ ಕುರಿತು ಆತಂಕ ವ್ಯಕ್ತಪಡಿಸಿದರು. ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಕಲ್ಪಿತ ಜ್ಞಾನಕ್ಕಿಂತ ಅನುಭವದ ಹಿನ್ನೆಲೆಯ ಜ್ಞಾನ ಮುನ್ನೆಲೆಗೆ ಬರುವಂತೆ ನಾವು ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದು ಎಷ್ಟು ಒಳ್ಳೆಯದು ಅಥವಾ ಕೆಟ್ಟದ್ದು ಎಂಬುದನ್ನು ಸಾಮಾಜಿಕ ಮಾನದಂಡದ ಮೂಲಕ ನಿರ್ಧರಿಸುವ ಅಗತ್ಯವಿದೆ ಎಂದು ಅವರು ನುಡಿದರು.ವಿಚಾರ ಸಂಕಿರಣವನ್ನು ಉದ್ಘಾಟಿಸಿದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳ ಕುಲಪತಿ ಪ್ರೊ. ಎಂ.ವಿ.ಧನಂಜಯ, ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಪುಸ್ತಕದ ಅರಿವಿನ ಜೊತೆಗೆ ಕೌಶಲಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ನುಡಿದರು.

ಕೃಷಿ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಪರಿಣಾಮಕಾರಿಯಾಗಿ ಬಳಕೆಯಾಗುತ್ತಿರುವುದನ್ನು ಮತ್ತು ಅದು ಒಡ್ಡುತ್ತಿರುವ ಸವಾಲುಗಳನ್ನು ತಿಳಿಯಪಡಿಸಿದರು. ಮುಖ್ಯ ಅತಿಥಿಗಳಾಗಿದ್ದ ಅಮೆರಿಕಾದಲ್ಲಿ ಹಿರಿಯ ತಂತ್ರಜ್ಞರಾಗಿರುವ ಪ್ರಶಾಂತ್ ಜಯರಾಂ ಮಾತನಾಡಿ, ಇಂದು ಕೃತಕ ಬುದ್ಧಿಮತ್ತೆ ಬದುಕನ್ನು ಸುಲಭ ಮಾಡಿದೆ. ಆದರೆ ನಾವು ಸಿದ್ಧ ಉತ್ತರಗಳನ್ನು ಪಡೆಯುವುದರಾಚೆಗೆ ಸೃಜನಶೀಲವಾಗಿ ಉತ್ತರಗಳನ್ನು ಕಂಡುಕೊಳ್ಳುವ ಕಡೆಗೆ ಸಾಗಬೇಕಾಗಿದೆ ಎಂದು ಹೇಳಿದರು.

ಇನ್ನೋರ್ವ ಮುಖ್ಯ ಅತಿಥಿ ಕುವೆಂಪು ವಿಶ್ವವಿದ್ಯಾಲಯದ ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಬಸವರಾಜ್.ಎನ್.ಜಗದಾಳೆ ಮಾತನಾಡಿದರು.ಪ್ರಾಂಶುಪಾಲೆ ಡಾ. ಪ್ರತಿಭಾ ಕೆ.ಆರ್ ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, ತಂತ್ರಜ್ಞಾನವನ್ನು ಅರಿಯುವುದು ಮತ್ತು ಅದರ ಮಿತಿಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಈ ಅರಿವಿನೊಂದಿಗೆ ವಿದ್ಯಾರ್ಥಿಗಳು ಮುನ್ನಡೆಯಬೇಕು ಎಂದರು.ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ.ಛಾಯಾಶ್ರೀ ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ವಿಚಾರ ಸಂಕಿರಣದ ಸಂಯೋಜಕ ಡಾ.ನಾಗರಾಜ ನಾಯ್ಕ್ ಸ್ವಾಗತಿಸಿದರು, ಸಹ ಸಂಯೋಜಕ ಶಂಕರ.ಎನ್.ಆರ್ ವಂದಿಸಿದರು.ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕಿ ದೀಪಾ.ಕೆ.ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ.ಎ.ಜಿ.ಅಮರಸಿಂಘೆ, ಡಾ.ಶಿಲುಜಾಸ್, ಡಾ.ಶಬಾನಾ ಫರ್ಹೀನ್, ಐಕ್ಯುಎಸಿ ಸಂಚಾಲಕಿ ಡಾ.ಭಾರತಿ ದೇವಿ.ಪಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಕ್ಸ್‌ಪ್ರೆಸ್‌ವೇ’ಗಳಲ್ಲಿ 120 ಕಿ.ಮೀ ವೇಗದಲ್ಲಿ‌ ವಾಹನ ಚಲಾಯಿಸಿದ್ರೂ ದಂಡವಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ದೇಶದ ಎಕ್ಸ್‌ಪ್ರೆಸ್‌ವೇಗಳಲ್ಲಿ ಗಂಟೆಗೆ 120 ಕಿ.ಮೀ. ವೇಗದಲ್ಲಿ ಸಂಚರಿಸುವ ವಾಹನಗಳಿಗೂ ಯಾವುದೇ...

ಬೀದರ್‌ | ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆಗೆ ಒತ್ತಾಯ

ಬೀದರ್ ನಗರದ ಅಂಗಡಿ-ಮುಂಗಟ್ಟುಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು, ಹೋಟೆಲ್‌ಗಳು ಸೇರಿದಂತೆ ಎಲ್ಲ ವಾಣಿಜ್ಯ...

ದಿಲ್ಲಿ ಮಾತು | ಕರವಾ ಚೌತ್‌: ಪಿತೃಸತ್ತೆ, ಸಂಪ್ರದಾಯದಾಚೆಗಿನ ಪ್ರಶ್ನೆಗಳು

ಪ್ರತಿ ಕಾರ್ತಿಕ ಮಾಸದ ಕೃಷ್ಣಪಕ್ಷದ ಚೌತಿಗೆ ತಪ್ಪದೆ ಬರುವ ’ಕರವಾ ಚೌತ್’...