ಭದ್ರಾವತಿ | ಜಯಂತಿಗಳ ರಜೆ ರದ್ದುಪಡಿಸಲು ಸರಕಾರದ ಗಮನ ಸೆಳೆಯುವೆ: ಶಾಸಕಿ ಶಾರದಾ ಪುರ್ಯಾನಾಯ್ಕ್

Date:

ಉಪನ್ಯಾಸಕರ ಅಭಿಪ್ರಾಯದಂತೆ ದಾರ್ಶನಿಕರ ಹೆಸರಲ್ಲಿ ನೀಡುವ ರಜೆಗಳನ್ನು ರದ್ದು ಪಡಿಸಿ ಶಾಲಾ ಕಾಲೇಜುಗಳಲ್ಲಿ ಜಯಂತಿಗಳನ್ನು ಆಚರಿಸಿ ಮಕ್ಕಳಿಗೆ ಅರಿವು ಮತ್ತು ಜಾಗೃತಿ ಮೂಡಿಸುವಂತೆ ಸರಕಾರದ ಗಮನ ಸೆಳೆಯಲಾಗುವುದು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹೇಳಿದರು.

- Advertisement -

ಅವರು ಸೋಮವಾರ ಹಳೇನಗರದ ಅಂಬೇಡ್ಕರ್ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ತಾಪಂ, ಸಮಾಜ ಕಲ್ಯಾಣ ಇಲಾಖೆ, ವಾಲ್ಮೀಕಿ ಸಮಾಜ, ಹಾಗೂ ತಾಲೂಕು ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಹರ್ಷಿ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಹೊಳೆಹೊನ್ನೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಧೀಕ್ಷಕ ಎಂ.ಬಿ.ಉಮೇಶ್ ಮಾತನಾಡಿ, “ಇಂದು ದಾರ್ಶನಿಕರ ಹೆಸರಲ್ಲಿ ನಡೆಯುವ ಜಯಂತಿಗಳು ಏತಕ್ಕಾಗಿ ನಡೆಯುತ್ತಿವೆ ಎಂಬುದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತಿಳಿಯುತ್ತಿಲ್ಲ. ದಾರ್ಶನಿಕರ, ಮಹನೀಯರ ಆದರ್ಶಗಳನ್ನು ಅರಿತು ಬಾಳ ಬೇಕಾದ ಶಾಲಾ ಮಕ್ಕಳು ಯಾರೂ ಇಂತಹ ಕಾರ್ಯಕ್ರಮಗಳಿಗೆ ಬಾರದೆ ಇರುವುದರಿಂದ ಸಮಯ ವ್ಯರ್ಥವಾಗುತ್ತಿದೆ. ಸಮಾಜಕ್ಕೆ ಬೆಳಕು ನೀಡಿದ ಮಹಾತ್ಮರನ್ನು ದಾರ್ಶನಿಕರನ್ನು ಜಾತಿಯ ಹೆಸರಲ್ಲಿ ಹಂಚಿಕೊಂಡಿರುವುದು ಸಮಾಜಕ್ಕೆ ದೊಡ್ಡ ಪಿಡುಗಾಗಿದೆ” ಎಂದರು.

Advertisements

ಆದ್ದರಿಂದ ಮಹನೀಯರ ಹೆಸರಲ್ಲಿ ನೀಡುವ ರಜಾ ದಿನಗಳನ್ನು ರದ್ದು ಪಡಿಸಿ ಅಂದು ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುವಂತೆ ಸರಕಾರದ ಗಮನ ಸೆಳೆಯಬೇಕೆಂದು ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯಾನಾಯ್ಕ್ ಅವರಿಗೆ ಮನವಿ ಮಾಡಿದರು. ಮಾಜಿ ನಗರಸಭಾಧ್ಯಕ್ಷ ಬಿ.ಕೆ ಮೋಹನ್ ಸಮಾರಂಭವನ್ನು ಉದ್ಘಾಟಿಸಿದರು.

ಡಿವೈಎಸ್‌ಪಿ ಪ್ರಕಾಶ್ ರಾಥೋಡ್, ನಗರಸಭೆ ಪೌರಾಯುಕ್ತ ಕೆ.ಎನ್.ಹೇಮಂತ್, ವಾಲ್ಮೀಕಿ ಸಮಾಜದ ಅಧ್ಯಕ್ಷ ಆನೆಕೊಪ್ಪ ಬಸವರಾಜ್ ಮತನಾಡಿದರು. ವೇದಿಕೆಯಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್ ಮುಂತಾದವರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ವಜಾಗೊಂಡರೆ, 30 ಸೆಕೆಂಡ್‌ನಲ್ಲಿ ಪ್ರತಿಭಟನೆ ಅಂತ್ಯ: ರಾಹುಲ್‌ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಪ್ರಧಾನಿ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ,...

ಬೀದರ್‌ | ಕಟಾವಿಗೆ ಬಂದಿದ್ದ ಕಬ್ಬಿನ ಬೆಳೆ ʼಬೆಂಕಿʼ ಪಾಲು, ಆರ್ಥಿಕ ಸಂಕಷ್ಟದಲ್ಲಿ ರೈತರು

ಜಿಲ್ಲೆಯ ವಿವಿಧೆಡೆ ಸಂಭವಿಸುತ್ತಿರುವ ಬೆಂಕಿ ಅವಘಡಗಳಿಂದಾಗಿ ಕೈಗೆ ಬಂದಿದ್ದ ಕಬ್ಬು ಸುಟ್ಟು...

ಕಠಿಣ ಹಾದಿಯಾದರೂ WTC ಫೈನಲ್ ತಲುಪಬಲ್ಲೆವು: ದಕ್ಷಿಣ ಆಫ್ರಿಕಾ ಆಟಗಾರ ಏಡೆನ್ ಮಾರ್ಕ್ರಮ್

ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ (WTC) ಸತತ ಎರಡನೇ ಬಾರಿ ಫೈನಲ್ ತಲುಪುವ...